ಭಟ್ಕಳ: ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಸೇವನೆ ಮಾಡಿದ ಆರೋಪದ ಮೇಲೆ ಭಟ್ಕಳ ನಗರ ಹಾಗೂ ಗ್ರಾಮೀಣ ಪೊಲೀಸರು ಮೂವರನ್ನು ಬಂಧಿಸಿರುವ ಘಟನೆಗಳು ನಡೆದಿವೆ.
ಮೊದಲ ಪ್ರಕರಣದಲ್ಲಿ, ಮುಂಬೈ ಜೋಗೇಶ್ವರಿ ನಿವಾಸಿಯಾಗಿರುವ ಮತ್ತು ಪ್ರಸ್ತುತ ಭಟ್ಕಳದ ಸೆಂಟ್ರಲ್ ಲಾಡ್ಜ್‌ನಲ್ಲಿ ವಾಸವಾಗಿದ್ದ ಇರ್ಫಾನ್ (28)ನನ್ನು ಭಟ್ಕಳ ನಗರ ಪೊಲೀಸರು ಬಂಧಿಸಿದ್ದಾರೆ. ಆತ ಸ್ಥಳೀಯ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದನೆಂದು ತಿಳಿದುಬಂದಿದೆ. ಹಳೆ ಬಸ್ ನಿಲ್ದಾಣದ ಸಮೀಪ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವೇಳೆ ಪೊಲೀಸರು ತಪಾಸಣೆ ನಡೆಸಿ, ಗಾಂಜಾ ಸೇವನೆ ಮಾಡಿರುವುದನ್ನು ಪತ್ತೆ ಹಚ್ಚಿದರು. ಬಳಿಕ ವೈದ್ಯಕೀಯ ಪರೀಕ್ಷೆಯಲ್ಲಿ ಇದು ದೃಢಪಟ್ಟಿದೆ.
ಇನ್ನೊಂದು ಪ್ರಕರಣದಲ್ಲಿ, ಭಟ್ಕಳ ಗ್ರಾಮೀಣ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಗುಳ್ಮೆ ಬೆಳಲಖಂಡ ನಿವಾಸಿ ಮಹಮ್ಮದ್ ಹುಸೇನ್ (56) ಸಾರ್ವಜನಿಕ ಸ್ಥಳದಲ್ಲಿ ಸಂಶಯಾಸ್ಪದವಾಗಿ ವರ್ತಿಸುತ್ತಿದ್ದ ವೇಳೆ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ಬೆಳಕಿಗೆ ಬಂದಿದೆ. ವೈದ್ಯಕೀಯ ಪರೀಕ್ಷೆಯಲ್ಲಿಯೂ ಇದು ದೃಢಪಟ್ಟಿದೆ.
ಮತ್ತೊಂದು ಘಟನೆಯಲ್ಲಿ, ಗಾಂಧಿನಗರದ ಶಮ್ಸ್ ಶಾಲೆಯ ಎದುರು ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆಜಾದ್ ನಗರ ನಿವಾಸಿ ಮಲೀಕ ರೆಹಾನ (27)ನನ್ನು ಪೊಲೀಸರು ಬಂಧಿಸಿದ್ದಾರೆ.
ಈ ಸಂಬಂಧ ನಗರ ಠಾಣೆ ಹಾಗೂ ಗ್ರಾಮೀಣ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ