ಭಟ್ಕಳ: ಸ್ವಸಹಾಯ ಸಂಘದ ಮಹಿಳೆಯರ ಆರ್ಥಿಕ ಸದೃಢತೆಗೆ ಉತ್ತೇಜನ ನೀಡುವ ಉದ್ದೇಶದಿಂದ, ಶ್ರೀ ಮಂಜುನಾಥ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವತಿಯಿಂದ ಏಪ್ರಿಲ್ 7ರಂದು ಮುಟ್ಟಳ್ಳಿಯ ಶಾಲಾ ಆವರಣದಲ್ಲಿ ಒಂದು ದಿನದ ಮಾಸಿಕ ಸಂತೆ ಆಯೋಜಿಸಲಾಗಿದೆ.
ಬೆಳಿಗ್ಗೆ 9 ಗಂಟೆಯಿಂದ ಆರಂಭವಾಗುವ ಈ ಸಂತೆಯಲ್ಲಿ ಸ್ವಸಹಾಯ ಸಂಘದ ಮಹಿಳೆಯರು ತಯಾರಿಸಿದ ವಿವಿಧ ಗೃಹೋಪಯೋಗಿ ಹಾಗೂ ಕೈಗಾರಿಕಾ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ.
ಸ್ಥಳೀಯವಾಗಿ ತಯಾರಿಸಲಾದ ಉತ್ಪನ್ನಗಳಿಗೆ ಉತ್ತೇಜನ ನೀಡುವುದರ ಜೊತೆಗೆ ಮಹಿಳೆಯರ ಸ್ವಾವಲಂಬನೆಯನ್ನು ಹೆಚ್ಚಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.
ಸರ್ವ ಸಾರ್ವಜನಿಕರು ಈ ಸಂತೆಯಲ್ಲಿ ಭಾಗವಹಿಸಿ, ಉತ್ಪನ್ನಗಳನ್ನು ಖರೀದಿಸುವ ಮೂಲಕ ಸ್ವಸಹಾಯ ಸಂಘದ ಮಹಿಳೆಯರಿಗೆ ಬೆಂಬಲ ನೀಡಬೇಕು ಎಂದು ಆಯೋಜಕರು ಮನವಿ ಮಾಡಿದ್ದಾರೆ.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ