ಶಿರಸಿ: ಸಂಘಟನಾತ್ಮಕವಾಗಿ ಪಕ್ಷವನ್ನು ಮತ್ತಷ್ಟು ಬಲಗೊಳಿಸುವ ಉದ್ದೇಶದಿಂದ ಭಾರತೀಯ ಜನತಾ ಪಕ್ಷ ತನ್ನ ಕಾರ್ಯಕರ್ತರಿಗೆ ನಿರಂತರವಾಗಿ ಪ್ರಶಿಕ್ಷಣ ವರ್ಗಗಳನ್ನು ನಡೆಸುತ್ತಿದ್ದು, ಇದೀಗ ನೂತನ ರಾಷ್ಟ್ರಾಧ್ಯಕ್ಷ ನಿತೀನ್ ನಬಿನ್ ಅವರ ಆಶಯದಂತೆ ದೇಶಾದ್ಯಂತ ವಿವಿಧ ಹಂತಗಳಲ್ಲಿ ಕಾರ್ಯಕರ್ತರಿಗಾಗಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಇದಿನ ಭಾಗವಾಗಿ ಶಿರಸಿ ಗ್ರಾಮೀಣ ಮಂಡಲದ ವತಿಯಿಂದ ಪಂಡಿತ್ ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾ ಅಭಿಯಾನವು ಏಪ್ರಿಲ್ 7 ಮತ್ತು 8 ರಂದು ತಾಲೂಕಿನ ಲಂಡಕನಹಳ್ಳಿಯ ಲಕ್ಷ್ಮೀನಾರಾಯಣ ಸಭಾಭವನದಲ್ಲಿ ನಡೆಯಲಿದೆ.
ಏಪ್ರಿಲ್ 7ರಂದು ಸಂಜೆ 5 ಗಂಟೆಗೆ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಕರ್ಕಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಎರಡು ದಿನಗಳ ಕಾಲ ವಿವಿಧ ಆಯಾಮಗಳಲ್ಲಿ ಕಾರ್ಯಕರ್ತರಿಗೆ ತರಬೇತಿ ನೀಡಲಾಗುತ್ತದೆ. ಪಕ್ಷದ ಹಿರಿಯ ನಾಯಕರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ.
ಏಪ್ರಿಲ್ 8ರಂದು ಮಧ್ಯಾಹ್ನ ಸಮಾರೋಪ ಸಮಾರಂಭ ನಡೆಯಲಿದ್ದು, ವಿಧಾನ ಪರಿಷತ್ ಶಾಸಕ ಶಾಂತಾರಾಮ ಸಿದ್ದಿ ಸಮಾರೋಪ ಭಾಷಣ ಮಾಡಲಿದ್ದಾರೆ.
ಈ ತರಬೇತಿ ವರ್ಗವು ಕಾರ್ಯಕರ್ತರಲ್ಲಿ ಸಂಘಟನೆಗೆ ಸಂಬಂಧಿಸಿದಂತೆ ಹೊಸ ಉತ್ಸಾಹ ಹಾಗೂ ಬಲವನ್ನು ತುಂಬಲಿದೆ ಎಂದು ಪ್ರಶಿಕ್ಷಣ ವರ್ಗದ ಸಂಚಾಲಕ ಅನಂತಮೂರ್ತಿ ಹೆಗಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author


More Stories
ಕಸ್ತೂರಿ ರಂಗನ್ ವರದಿ: ಸೂಕ್ಷ್ಮ ಪ್ರದೇಶ ಅಧ್ಯಯನಕ್ಕೆ ಸಮಿತಿ ರಚನೆ ಹಾಗೂ ಜನವಸತಿ ಪ್ರದೇಶ ಮುಕ್ತಗೊಳಿಸಲು ರವೀಂದ್ರ ನಾಯ್ಕ ಆಗ್ರಹ
ಶಿರಸಿಯಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಬೃಹತ್ ರ್ಯಾಲಿ: ವರದಿ ತಿರಸ್ಕರಿಸಲು ಹಕ್ಕು ಒತ್ತಾಯ
ನದಿ ತಿರುವು ಯೋಜನಾ ವಿರೋಧಿ ಹೋರಾಟ ತೀವ್ರಗೊಳಿಸುವುದು ಅನಿವಾರ್ಯ: ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ