ಭಟ್ಕಳ: ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಟಿಎಚ್ಒ ಡಾ. ಸನಾ ನೇತೃತ್ವದ ತಂಡವು ಸೋಮವಾರ ಪಟ್ಟಣದ ವಿವಿಧ ಪ್ರದೇಶಗಳಲ್ಲಿ ನಕಲಿ ಕ್ಲಿನಿಕ್ಗಳ ಮೇಲೆ ದಾಳಿ ನಡೆಸಿ ೩ ಕ್ಲಿನಿಕ್ಗಳನ್ನು ಸೀಜ್ ಮಾಡಿದೆ.
ಟಿಎಚ್ಒ ಡಾ. ಸನಾ, ನೋಡಲ್ ಅಧಿಕಾರಿ, ಆಯುಷ್ ಅಧಿಕಾರಿ ಹಾಗೂ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ಒಟ್ಟಾಗಿ ಪಟ್ಟಣದ ನಾಲ್ಕು ಕ್ಲಿನಿಕ್ಗಳು ಹಾಗೂ ಶಿರಾಲಿಯೊಂದರ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಈ ವೇಳೆ ಸಂಬಂಧಿತ ವೈದ್ಯರು ಹೊಂದಿರುವ ಎಂಬಿಬಿಎಸ್, ಬಿಎಎಂಎಸ್, ಬಿಎಚ್ಎಂಎಸ್ ಮತ್ತು ಯುನಾನಿ ಪದವಿ ಪ್ರಮಾಣಪತ್ರಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಯಿತು.

ಪರಿಶೀಲನೆಯ ವೇಳೆ ನಿಯಮ ಬಾಹಿರವಾಗಿ ಕಾರ್ಯನಿರ್ವಹಿಸುತ್ತಿದ್ದ ಕ್ಲಿನಿಕ್ಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಒಟ್ಟು ೩ ಕ್ಲಿನಿಕ್ಗಳನ್ನು ಸೀಜ್ ಮಾಡಲಾಗಿದ್ದು, ಮದಿನಾ ಕಾಲನಿಯ ಕ್ಲಿನಿಕ್ ಮಾಲಿಕರು ಸ್ವಯಂ ಪ್ರೇರಿತವಾಗಿ ಕ್ಲಿನಿಕ್ ಮುಚ್ಚಿದ್ದು, ಅವರ ಬಾಗಿಲಿಗೆ ನೋಟಿಸ್ ಅಂಟಿಸಲಾಗಿದೆ.
ಈ ಪ್ರಕರಣಗಳ ಕುರಿತು ಮಾಹಿತಿಯನ್ನು ಜಿಲ್ಲಾ ಆರೋಗ್ಯ ಇಲಾಖೆಗೆ ರವಾನಿಸಲಾಗಿದ್ದು, ಸಮಗ್ರ ತನಿಖೆಯ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಟಿಎಚ್ಒ ತಿಳಿಸಿದ್ದಾರೆ.
ಪಟ್ಟಣ ಹಾಗೂ ತಾಲೂಕಿನ ವಿವಿಧ ಭಾಗಗಳಲ್ಲಿ ಇಂತಹ ಪರಿಶೀಲನಾ ಕಾರ್ಯ ಮುಂದುವರಿಯಲಿದ್ದು, ಸಾರ್ವಜನಿಕರು ಅನಧಿಕೃತ ವೈದ್ಯರ ಬಳಿ ಚಿಕಿತ್ಸೆ ಪಡೆಯದೆ, ಸರ್ಕಾರ ಮಾನ್ಯತೆ ಪಡೆದ ನೋಂದಾಯಿತ ವೈದ್ಯರಿಂದ ಮಾತ್ರ ಚಿಕಿತ್ಸೆ ಪಡೆಯಬೇಕು ಎಂದು ಟಿಎಚ್ಒ ಡಾ. ಸನಾ ಮನವಿ ಮಾಡಿದ್ದಾರೆ.


More Stories
ಹೆದ್ದಾರಿ ಅಪಘಾತಕ್ಕೆ ಸ್ಕೂಟಿ ಸವಾರ ಬಲಿ: ಅವೈಜ್ಞಾನಿಕ ವಿನ್ಯಾಸ ಆರೋಪಿಸಿ ಭಟ್ಕಳದಲ್ಲಿ ಸಾರ್ವಜನಿಕರ ಆಕ್ರೋಶ, ಪ್ರತಿಭಟನೆ
ಲಂಡನ್ನಲ್ಲಿ ‘ಅಡ್ವಾನ್ಸ್ಡ್ ನಾಟಿಕಲ್ ಸೈನ್ಸ್’ ಕೋರ್ಸ್ ಯಶಸ್ವಿಯಾಗಿ ಪೂರ್ಣಗೊಳಿಸಿದ ಭಟ್ಕಳದ ಹೆಮ್ಮೆಯ ಯುವಕ ಪ್ರಜ್ವಲ್ ನಾಯ್ಕ
ಬೈಲೂರು ಕ್ಲಸ್ಟರ್ನ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮುಂಬೈನ ಅನಿರುದ್ಧ ಬಾಪು ಟ್ರಸ್ಟ್ನಿಂದ ಉಚಿತ ನೋಟ್ಬುಕ್ ವಿತರಣೆ