April 16, 2026

ಬೀನಾ ವೈದ್ಯ ಕಾಲೇಜಿನಲ್ಲಿ ಶೇ 100% ಫಲಿತಾಂಶ

ಭಟ್ಕಳ : ಮುರುಡೇಶ್ವರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಬೀನಾ ವೈದ್ಯ ಪದವಿ ಪೂರ್ವ ಕಾಲೇಜಿನ ವಿಧ್ಯಾರ್ಥಿಗಳು ದ್ವಿತೀಯ ಪಿ.ಯು.ಸಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇ 100% ಫಲಿತಾಂಶವನ್ನು ದಾಖಲಿಸಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಆರ್ಯನ್ ಶ್ರೀಧರ ನಾಯ್ಕ 98% ನೊಂದಿಗೆ ಪ್ರಥಮ, ಚೇತನ ವಿಜಯ್‌ಕುಮಾರ ನಾಯ್ಕ 96.66 % ನೊಂದಿಗೆ ದ್ವಿತೀಯ, ಮತ್ತು ಸುಮುಖ ಕೃಷ್ಣ ನಾಯ್ಕ 96.33% ನೊಂದಿಗೆ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಸ್ವಾತಿ ಅನೀಲ್ ಪ್ರಭು 96% ನೊಂದಿಗೆ ಪ್ರಥಮ, ಜೀಫಾ ಗಂಗಾವಳಿ 95% ನೊಂದಿಗೆ ದ್ವಿತೀಯ, ಮನೋಜ್ ಚಂದ್ರು ಗೌಡ 93.67% ನೊಂದಿಗೆ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. 7 ವಿದ್ಯಾರ್ಥಿ ಶೇ 95% ಕ್ಕೂ ಹೆಚ್ಚು ಅಂಕಗಳನ್ನು 12 ವಿದ್ಯಾರ್ಥಿಗಳು ಶೇ 90% ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿದ್ದು ಹಾಗೂ ಪರಿಕ್ಷೆಗೆ ಹಾಜರಾದ 26 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗುವ ಮೂಲಕ ಉತ್ತಮ ಸಾಧನೆ ಮಾಡಿರುತ್ತಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಬೀನಾ ವೈದ್ಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಮಾನ್ಯ ಸಚಿವರು ಮೀನುಗಾರಿಕೆ, ಬಂದರು ಒಳನಾಡು ಜಲಸಾರಿಗೆ ಇಲಾಖೆ ಕರ್ನಾಟಕ ಸರ್ಕಾರ ಹಾಗೂ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಆದ ಶ್ರೀ ಮಂಕಾಳ್ ಎಸ್ ವೈದ್ಯರವರು, ಬೀನಾ ವೈದ್ಯ ಶಿಕ್ಷಣ ಸಂಸ್ಥೆಯ ಟ್ರಸ್ಟಿ, ಆಡಳಿತ ನಿರ್ದೇಶಕಿಯವರಾದ ಡಾ.ಪುಷ್ಪಲತಾ ಮಂಕಾಳ್ ವೈದ್ಯರವರು, ಬೀನಾ ವೈದ್ಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನಯೀಮ್ ಗೋರಿಯವರು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

About The Author

error: Content is protected !!