August 29, 2025

ಬೋಟ್ ಕ್ಯಾಬಿನ್‌ನಲ್ಲಿ ಮಲಗಿದ್ದ ವ್ಯಕ್ತಿ ಸಾವು

ಭಟ್ಕಳ: ತಾಲೂಕಿನ ಮಾವಿನಕುರ್ವೆ ಬಂದರಿನಲ್ಲಿ ಬೋಟ್ ಕ್ಯಾಬಿನ್‌ನಲ್ಲಿ ಮಲಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ ಬಂದಿದೆ. ಮೃತರನ್ನು ಛತ್ತೀಸ್‌ಗಢ ಮೂಲದ ಬುಧನ ಸಾಯ್ ತಂದೆ ಜನೇಶ್ವರ ಸಾಯ್ (39) ಎಂದು ಗುರುತಿಸಲಾಗಿದೆ.ಇವರು ಮದ್ಯಪಾನದ ಚಟ ಹೊಂದಿದ್ದರು ಎಂದು ತಿಳಿದುಬಂದಿದೆ.

ಬೋಟ್ ಕ್ಯಾಬಿನ್‌ನಲ್ಲಿ ಮಲಗಿದ್ದ ಇವರನ್ನು ಬೆಳಿಗ್ಗೆ ಎಬ್ಬಿಸಲು ಹೋದಾಗ ಪ್ರತಿಕ್ರಿಯಿಸದೇ ಇರುವುದರಿಂದ ತಕ್ಷಣ ಭಟ್ಕಳ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರಿಶೀಲಿಸಿದ ವೈದ್ಯರು ಈತ ಮೃತಪಟ್ಟಿರುವುದನ್ನು ದೃಢ ಪಡಿಸಿದ್ದಾರೆ.

ಈ ಕುರಿತು ಮೃತನ ಸಹೋದರ ಗೌತಮ ಪೈಂಕರ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

About The Author