August 29, 2025

ಹೆಂಡತಿ ಸಾವಿನಿಂದ ಬೇಸರಗೊಂಡ ಪತಿ ಆತ್ಮಹತ್ಯೆ

ಭಟ್ಕಳ ತಾಲೂಕಿನ ಹೆಬಳೆ ಗ್ರಾಮದ ಹೊನ್ನಗದ್ದೆಯಲ್ಲಿ, ಹೆಂಡತಿ ಸಾವಿನಿಂದ ಬೇಸರಗೊಂಡಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರನ್ನು ಮಂಜುನಾಥ ಈರಪ್ಪ ನಾಯ್ಕ (64) ಎಂದು ಗುರುತಿಸಲಾಗಿದೆ. ಮೇಸ್ತ್ರಿ ಕೆಲಸ ಮಾಡುತ್ತಿದ್ದ ಇವರು ತಮ್ಮ ಹೆಂಡತಿ ನಿಧನದ ಬಳಿಕ ಜೀವನದಲ್ಲಿ ನಿರಾಸೆಗೊಂಡಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ. ಮನೆಯ ಸಮೀಪದ ಅರಣ್ಯ ಪ್ರದೇಶದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬAಧ ಮೃತರ ಮಗ ಪಾಂಡುರAಗ ನಾಯ್ಕ (38) ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

About The Author