ಭಟ್ಕಳ: ತಾಲೂಕಿನ ಜಾಲಿ ಸಮುದ್ರ ತೀರದಲ್ಲಿ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.
ಮೃತರನ್ನು ಜಾಲಿ ಬೀಚ್ ರೋಡ್ ನಿವಾಸಿಯಾದ ಈರಯ್ಯ ತಂದೆ ಮಾಸ್ತಪ್ಪ ಮೊಗೇರ (65) ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಅವರು ಎಂದಿನಂತೆ ಮೀನುಗಾರಿಕೆಗೆ ತೆರಳಿದ್ದ ವೇಳೆ ಅನಾಹುತವಾಗಿ ಸಮುದ್ರದಲ್ಲಿ ಮುಳುಗಿದರೆಂದು ತಿಳಿದುಬಂದಿದೆ.
ಈ ಕುರಿತು ಮೃತರ ಪುತ್ರ ಮನೋಹರ ಮೊಗೇರ ನಗರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ