ಭಟ್ಕಳ: ಅಕ್ರಮವಾಗಿ ಒಂಟೆಗಳನ್ನು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.
ಬಂಧಿತ ಆರೋಪಿಗಳನ್ನು ಕರಣ ಬಾಬರ (26, ಮಧ್ಯಪ್ರದೇಶ), ಸುಹಾಸ ಸೂರ್ಯವಂಶಿ (22, ಶಿರೋಡ್ – ಕೊಲ್ಲಾಪುರ) ಹಾಗೂ ಯಶ ಗೋಟಕಿಂಡೆ (19, ಶಿರೋಡ್ – ಕೊಲ್ಲಾಪುರ) ಎಂದು ಗುರುತಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಶಿರಾಲಿ ಕಡೆಯಿಂದ ಉಳ್ಳಾಲ ಕಡೆಗೆ ಲಾರಿ ಮೂಲಕ ಸುಮಾರು ₹3.75 ಲಕ್ಷ ಮೌಲ್ಯದ 8 ಒಂಟೆಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಸಾಗಾಟ ಮಾಡಲಾಗುತ್ತಿತ್ತು. ಆರೋಪಿಗಳು ಒಂಟೆಗಳಿಗೆ ನೀರು ಹಾಗೂ ಮೇವು ನೀಡದೇ, ಜಾನುವಾರು ಸಾಗಾಟಕ್ಕೆ ಅಗತ್ಯವಾದ ಸಕ್ಷಮ ಪ್ರಾಧಿಕಾರದ ಪರವಾನಿಗೆಯಿಲ್ಲದೇ ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.
ಈ ವೇಳೆ ಪೊಲೀಸರು ಲಾರಿಯನ್ನು ತಡೆದು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಲಾರಿ ಸಹಿತ ಒಂಟೆಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ದೂರು ದಾಖಲಾಗಿದೆ,ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ