ಭಟ್ಕಳ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಶ್ಚಿಮ ಬಂಗಾಳ, ಆಸಾಂ ಹಾಗೂ ಪಾಂಡಿಚೇರಿಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಭಟ್ಕಳ ಮಂಡಳದ ವತಿಯಿಂದ ಪಟ್ಟಣದ ಮುಖ್ಯ ವೃತ್ತದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಲಾಯಿತು.
ಕಾರ್ಯಕರ್ತರು ಸಿಹಿ ಹಂಚಿಕೊಂಡು ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಮಂಡಳ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ, ಪ್ರಮುಖರಾದ ರಾಜೇಶ್ ನಾಯ್ಕ, ಸುಬ್ರಾಯ ದೇವಡಿಗ, ಭಾಸ್ಕರ ದೇವಿಮನೆ, ಮೋಹನ ನಾಯ್ಕ, ಸುಬ್ರಾಯ ನಾಯ್ಕ, ವೆಂಕಟೇಶ ನಾಯ್ಕ, ಶ್ರೀಕಾಂತ ನಾಯ್ಕ, ಶ್ರೀನಿವಾಸ ನಾಯ್ಕ, ಕೇಶವ ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

More Stories
ಭಟ್ಕಳದಲ್ಲಿ ಮೇ 15ರಿಂದ ಬೃಹತ್ ಹಲಸು-ಹಣ್ಣಿನ ಮೇಳ
ಹನುಮಾನ್ ನಗರ ಶಾಲಾ ಆವರಣದಲ್ಲಿ ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಒತ್ತಾಯ
ಮುಂಗಾರು ಮುನ್ನ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಎಸಿ ಸೂಚನೆ