

ಭಟ್ಕಳ: ಮುರ್ಡೇಶ್ವರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮಾಜಿ ಸೈನಿಕರೊಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಮುರ್ಡೇಶ್ವರ ರೈಲ್ವೆ ನಿಲ್ದಾಣದ ಎದುರು ಈ ದುರ್ಘಟನೆ ನಡೆದಿದೆ. ಕೇರಳದಿಂದ ಮುರ್ಡೇಶ್ವರದತ್ತ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.


ಅಪಘಾತದ ವೇಳೆ ಕಾರಿನ ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ಕೇರಳ ಮೂಲದ ಸಾಗರನಾಥ್ (40), ಸತ್ವನಾಥ್ ಅವರ ಪುತ್ರ ಹಾಗೂ ಮಾಜಿ ಸೈನಿಕ, ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇನ್ನೂ ಮೂವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಮುರ್ಡೇಶ್ವರ ಠಾಣೆಯ ಪಿಎಸ್‌ಐ ಹನುಮಂತ ಭಿರಾದಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

About The Author




More Stories
ತೆರೆದ ಚರಂಡಿ ಹೊಂಡ: ಅಪಾಯದ ನಡುವೆ ಭಟ್ಕಳದ ವಾಹನ ಸವಾರರ ಸಂಚಾರ.
ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಮಂಕಾಳ್ ಎಸ್. ವೈದ್ಯ ಆಯ್ಕೆ: ಮಾಜಿ ಸಚಿವರಿಗೆ ಭಟ್ಕಳದಲ್ಲಿ ಅದ್ಧೂರಿ ಸ್ವಾಗತ.
ಆಗಸ್ಟ್ 18ರಂದು ಭಟ್ಕಳದಲ್ಲಿ ಬೃಹತ್ ರಕ್ತದಾನ ಶಿಬಿರ: ಡಾ. ಸುರೇಶ ನಾಯಕ್ ಸ್ಮರಣಾರ್ಥ ಆಯೋಜನೆ