ಭಟ್ಕಳ: ತಾಲೂಕಿನ ಹೆಬಳೆ ಗ್ರಾಮದ ಸಿದ್ದಿವಿನಾಯಕ ದೇವಸ್ಥಾನ ಸಮೀಪ ಕಳೆದ ಕೆಲವು ದಿನಗಳಿಂದ ಮಂಗನ ಕಾಟ ಹೆಚ್ಚಾಗಿದ್ದು, ಈಗಾಗಲೇ ಮೂವರು ಮಹಿಳೆಯರಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ನಡೆದಿದೆ.

ಗ್ರಾಮದಲ್ಲಿ ಮನೆಮನೆಗೆ ನುಗ್ಗುತ್ತಿರುವ ಈ ಮಂಗ ಸಾರ್ವಜನಿಕರಲ್ಲಿ ಭೀತಿ ಉಂಟುಮಾಡಿದ್ದು, ಮಹಿಳೆಯರು, ಮಕ್ಕಳು ಹಾಗೂ ವೃದ್ಧರು ಮನೆಯಿಂದ ಹೊರಬರಲು ಸಹ ಆತಂಕಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಈ ಕುರಿತು ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿರುವುದಲ್ಲದೆ, ಸ್ಥಳೀಯ ಪಂಚಾಯತ್ ಅಧಿಕಾರಿಗಳಿಗೆ ಲಿಖಿತ ಅರ್ಜಿಯನ್ನೂ ಸಲ್ಲಿಸಿದ್ದಾರೆ. ಆದರೆ ಅರ್ಜಿ ಸಲ್ಲಿಸಿ ಹದಿನೈದು ದಿನಗಳಾದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮೂರು ಕಮಲರಿಗೆ ಮಂಗ ದಾಳಿ
ಉಪಟಳ ನೀಡುತ್ತಿರುವ ಮಂಗವು ಹೆಬಳೆ ಭಾಗದ ಮೂವರು ಮಹಿಳೆಯರ ಮೇಲೆ ದಾಳಿ ನಡೆಸಿ ಕಚ್ಚಿ ಗಾಯಗೊಳಿಸಿದೆ. ವಿಶೇಷವೆಂದರೆ, ಗಾಯಗೊಂಡ ಮೂವರು ಮಹಿಳೆಯರ ಹೆಸರೂ ಕಮಲ ಎಂಬುದಾಗಿ ತಿಳಿದುಬಂದಿದ್ದು, ಇದು ಸ್ಥಳೀಯರಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.
ಈ ಕುರಿತು ವಲಯ ಅರಣ್ಯಾಧಿಕಾರಿ ವಿಶ್ವನಾಥ ನಾಯ್ಕ ಮಾತನಾಡಿ, ಮಾಹಿತಿ ಲಭ್ಯವಾದ ತಕ್ಷಣ ನಮ್ಮ ಸಿಬ್ಬಂದಿ ಸ್ಥಳಕ್ಕೆ ತೆರಳಿ ಉಪಟಳ ನೀಡಿದ ಮಂಗವನ್ನು ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ ಅದು ಬೇರೆ ಮಂಗಗಳ ಗುಂಪಿಗೆ ಸೇರಿಕೊಂಡಿರುವುದರಿAದ ಕಾರ್ಯಾಚರಣೆಗೆ ತೊಂದರೆಯಾಗಿದೆ. ಸಾರ್ವಜನಿಕರು ಮಂಗ ಕಂಡುಬAದ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಬೇಕು” ಎಂದು ಮನವಿ ಮಾಡಿದ್ದಾರೆ.

ಉಪಟಳ ನೀಡುತ್ತಿರುವ ಮಂಗವನ್ನು ತಕ್ಷಣ ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವAತೆ ಸಂಬAಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹೆಬಳೆಯ ನಾಗರಿಕರು ಆಗ್ರಹಿಸಿದ್ದಾರೆ.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ