ಭಟ್ಕಳ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪಿತರು ಅರಣ್ಯ ಇಲಾಖೆ ಜೀಪ್ ಕಂಡ ತಕ್ಷಣ ಕಾರು ಬಿಟ್ಟು ಪರಾರಿಯಾದ ಘಟನೆ ತಾಲೂಕಿನ ಹಾಡುವಳ್ಳಿ ಗ್ರಾಮದ ಹಲ್ಯಾಣಿ ಬಳಿ ನಡೆದಿದೆ.

ವಧೆ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಆರೋಪಿತರು ಮಾರುತಿ ಸುಜುಕಿ ಬಲೆನೋ ಕಾರಿನಲ್ಲಿ ಸುಮಾರು ?1.03 ಲಕ್ಷ ಮೌಲ್ಯದ ಜಾನುವಾರುಗಳನ್ನು ತುಂಬಿಕೊAಡು ಸಾಗಿಸುತ್ತಿದ್ದರು ಎನ್ನಲಾಗಿದೆ. ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ, ನೀರು ಹಾಗೂ ಹುಲ್ಲು ನೀಡದೆ ಸಾಗಿಸಲಾಗುತ್ತಿತ್ತು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬೆಳಗಿನ ಜಾವ ಹಲ್ಯಾಣಿ ಪ್ರದೇಶದಲ್ಲಿ ಪೆಟ್ರೋಲಿಂಗ್ ನಡೆಸುತ್ತಿದ್ದ ಅರಣ್ಯ ಇಲಾಖೆ ವಾಹನವನ್ನು ಕಂಡ ಆರೋಪಿತರು ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.
ಬಳಿಕ ಅಧಿಕಾರಿಗಳು ವಾಹನವನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ. ಈ ಸಂಬAಧ ಆರೋಪಿತರ ವಿರುದ್ಧ ಗ್ರಾಮೀಣ ಠಾಣೆ ಪಿಎಸೈ ಮಲ್ಲಿಕಾರ್ಜುನಯ್ಯ ಕೊರಾಣಿ ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ