ಭಟ್ಕಳ: ಇಲ್ಲಿನ ರೈಲ್ವೇ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಹಳಿಯ ಕೆಳಗೆ ಬಿದ್ದ ಘಟನೆ ನಿನ್ನೆ ರಾತ್ರಿ ನಡೆದಿದ್ದು, ಸಹ ಪ್ರಯಾಣಿಕರ ಸಮಯಪ್ರಜ್ಞೆಯಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರವಾರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಪಂಚಗAಗಾ ಎಕ್ಸ್ಪ್ರೆಸ್ ರೈಲು ಭಟ್ಕಳ ನಿಲ್ದಾಣಕ್ಕೆ ಆಗಮಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ರೈಲು ನಿಲ್ಲುವ ಮೊದಲೇ ಮಹಿಳೆ ಬಾಗಿಲಿನ ಸಮೀಪ ಬಂದಿದ್ದಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯನ್ನು ಗಮನಿಸಿದ ಸಹ ಪ್ರಯಾಣಿಕರು ತಕ್ಷಣ ರೈಲಿನ ತುರ್ತು ಚೈನ್ ಎಳೆದಿದ್ದಾರೆ. ಪರಿಣಾಮ ರೈಲು ತಕ್ಷಣ ನಿಂತಿದ್ದು, ಮಹಿಳೆಗೆ ಯಾವುದೇ ಗಂಭೀರ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಬಳಿಕ ರೈಲನ್ನು ಸ್ವಲ್ಪ ಹಿಂದಕ್ಕೆ ಚಲಿಸಿ ಹಳಿಯ ಕೆಳಗಿದ್ದ ಮಹಿಳೆಯನ್ನು ಸುರಕ್ಷಿತವಾಗಿ ಹೊರತೆಗೆದು ರಕ್ಷಿಸಲಾಗಿದೆ.

ಮಹಿಳೆಯ ಹೆಸರು ಹಾಗೂ ವಿಳಾಸ ಇನ್ನಷ್ಟೇ ತಿಳಿದುಬರಬೇಕಿದೆ. ಘಟನೆ ವೇಳೆ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ