ಏರ್‌ಬ್ಯಾಗ್‌ನಿಂದ ತಪ್ಪಿದ ಭಾರೀ ವೆಂಕ್ಚಾಪುರ ಸೇತುವೆ ಬಳಿ ಕಾರುಗಳ ಭೀಕರ ಡಿಕ್ಕಿ ನಾಲ್ವರಿಗೆ ಗಾಯ;
ಏರ್‌ಬ್ಯಾಗ್‌ನಿಂದ ತಪ್ಪಿದ ಭಾರೀ ಅನಾಹುತ

ಭಟ್ಕಳ: ತಾಲೂಕಿನ ವೆಂಕ್ಚಾಪುರ ಸೇತುವೆ ಸಮೀಪ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ತಡರಾತ್ರಿ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಗಾಯಗೊಂಡ ಘಟನೆ ನಡೆದಿದೆ.

ಹಾವೇರಿ ಮೂಲದ ಬೀಮಪ್ಪ ಹನುಮಂತಪ್ಪ ಗಣಜೂರು ಚಾಲನೆ ಮಾಡುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಭಟ್ಕಳದಿಂದ ಹೊನ್ನಾವರ ಕಡೆಗೆ ಅತೀವೇಗ ಹಾಗೂ ಅಜಾಗರೂಕತೆಯಿಂದ ಸಂಚರಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಲಭಾಗಕ್ಕೆ ಹೋಗಿ ಎದುರಿನಿಂದ ಬರುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಮಾರುತಿ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ಪರಿಣಾಮ ಕಾರಿನಲ್ಲಿದ್ದ ಮೊಹಮ್ಮದ್ ಮುಶಾಫರ್ (26), ಫೌಜಿಯಾ ಎ., ಮೊಹಮ್ಮದ್ ಅಶ್ರಫ್ (29), ಮೊಹಮ್ಮದ್ ಅಶ್ರಫ್ ಇಸ್ಮಾಯಿಲ್ (34), ಅಬ್ದುಲ್ ಖಾದರ್ ಅಜ್ವಲ್ (21) ಹಾಗೂ ಮೊಹಮ್ಮದ್ ಅಸ್ಥಾನ್ (19) ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸಲು ಅಂಬುಲೆನ್ಸ್ಗೆ ಕರೆ ಮಾಡಿದರೂ ವಿಳಂಬವಾಗಿದ್ದ ಹಿನ್ನೆಲೆಯಲ್ಲಿ ಹೆದ್ದಾರಿ ಪೊಲೀಸ್ ಗಸ್ತು ವಾಹನದಲ್ಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗಿದೆ.


ಎರಡೂ ಕಾರಿನ ಪ್ರಯಾಣಿಕರು ಸೀಟ್ ಬೆಲ್ಟ್ ಧರಿಸಿದ್ದರಿಂದ ಹಾಗೂ ವಾಹನಗಳ ಏರ್‌ಬ್ಯಾಗ್‌ಗಳು ತೆರೆದ ಪರಿಣಾಮ ದೊಡ್ಡ ಅನಾಹುತ ತಪ್ಪಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಮಲ್ಲಜಾರ್ಜುನಯ್ಯ ಕೊರಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.ಅನಾಹುತ

ಭಟ್ಕಳ: ತಾಲೂಕಿನ ವೆಂಕ್ಚಾಪುರ ಸೇತುವೆ ಸಮೀಪ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ತಡರಾತ್ರಿ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಗಾಯಗೊಂಡ ಘಟನೆ ನಡೆದಿದೆ.
ಹಾವೇರಿ ಮೂಲದ ಬೀಮಪ್ಪ ಹನುಮಂತಪ್ಪ ಗಣಜೂರು ಚಾಲನೆ ಮಾಡುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಭಟ್ಕಳದಿಂದ ಹೊನ್ನಾವರ ಕಡೆಗೆ ಅತೀವೇಗ ಹಾಗೂ ಅಜಾಗರೂಕತೆಯಿಂದ ಸಂಚರಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಲಭಾಗಕ್ಕೆ ಹೋಗಿ ಎದುರಿನಿಂದ ಬರುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಮಾರುತಿ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ಪರಿಣಾಮ ಕಾರಿನಲ್ಲಿದ್ದ ಮೊಹಮ್ಮದ್ ಮುಶಾಫರ್ (26), ಫೌಜಿಯಾ ಎ., ಮೊಹಮ್ಮದ್ ಅಶ್ರಫ್ (29), ಮೊಹಮ್ಮದ್ ಅಶ್ರಫ್ ಇಸ್ಮಾಯಿಲ್ (34), ಅಬ್ದುಲ್ ಖಾದರ್ ಅಜ್ವಲ್ (21) ಹಾಗೂ ಮೊಹಮ್ಮದ್ ಅಸ್ಥಾನ್ (19) ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸಲು ಅಂಬುಲೆನ್ಸ್ಗೆ ಕರೆ ಮಾಡಿದರೂ ವಿಳಂಬವಾಗಿದ್ದ ಹಿನ್ನೆಲೆಯಲ್ಲಿ ಹೆದ್ದಾರಿ ಪೊಲೀಸ್ ಗಸ್ತು ವಾಹನದಲ್ಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತರ‍್ತು ಚಿಕಿತ್ಸೆ ನೀಡಲಾಗಿದೆ.
ಎರಡೂ ಕಾರಿನ ಪ್ರಯಾಣಿಕರು ಸೀಟ್ ಬೆಲ್ಟ್ ಧರಿಸಿದ್ದರಿಂದ ಹಾಗೂ ವಾಹನಗಳ ಏರ್‌ಬ್ಯಾಗ್‌ಗಳು ತೆರೆದ ಪರಿಣಾಮ ದೊಡ್ಡ ಅನಾಹುತ ತಪ್ಪಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಮಲ್ಲಜರ‍್ಜುನಯ್ಯ ಕೊರಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

More Stories
ಹೆದ್ದಾರಿ ಅಪಘಾತಕ್ಕೆ ಸ್ಕೂಟಿ ಸವಾರ ಬಲಿ: ಅವೈಜ್ಞಾನಿಕ ವಿನ್ಯಾಸ ಆರೋಪಿಸಿ ಭಟ್ಕಳದಲ್ಲಿ ಸಾರ್ವಜನಿಕರ ಆಕ್ರೋಶ, ಪ್ರತಿಭಟನೆ
ಲಂಡನ್ನಲ್ಲಿ ‘ಅಡ್ವಾನ್ಸ್ಡ್ ನಾಟಿಕಲ್ ಸೈನ್ಸ್’ ಕೋರ್ಸ್ ಯಶಸ್ವಿಯಾಗಿ ಪೂರ್ಣಗೊಳಿಸಿದ ಭಟ್ಕಳದ ಹೆಮ್ಮೆಯ ಯುವಕ ಪ್ರಜ್ವಲ್ ನಾಯ್ಕ
ಬೈಲೂರು ಕ್ಲಸ್ಟರ್ನ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮುಂಬೈನ ಅನಿರುದ್ಧ ಬಾಪು ಟ್ರಸ್ಟ್ನಿಂದ ಉಚಿತ ನೋಟ್ಬುಕ್ ವಿತರಣೆ