ಕೆ.ಆರ್.ಪೇಟೆ : ಅವರು ಕೆಆರ್ ಪೇಟೆ ಪಟ್ಟಣದ ಬಿಜಿಎಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಬಿಜಿಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಆಯೋಜಿಸಿದ್ದ ಎರಡು ದಿನಗಳ ಶಿಕ್ಷಕರ ಶೈಕ್ಷಣಿಕ ಕಾರ್ಯಗಾರ 2026ರನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಶಿಕ್ಷಕರು ಸಮಾಜದ ಪರಿವರ್ತಕರಾಗಿದ್ದು ಆರೋಗ್ಯವಂತ ಸಮಾಜದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ನಿರ್ಣಾಯಕವಾಗಿದೆ. ಅಜ್ಞಾನದ ಅಂಧಕಾರವನ್ನು ಹೊಡೆದೋಡಿಸಿ, ಜ್ಞಾನದ ಬೆಳಕಿನ ಸಂಸ್ಕಾರವನ್ನು ಮಕ್ಕಳಿಗೆ ನೀಡಲು ಬದ್ಧತೆಯಿಂದ ಕೆಲಸ ಮಾಡುತ್ತಿರುವ ಶಿಕ್ಷಕರ ಕಾರ್ಯದಕ್ಷತೆಯು ನಾಗರೀಕ ಸಮಾಜಕ್ಕೆ ಮಾದರಿಯಾಗಿದೆ. ಶಿಕ್ಷಕರು ಪ್ರತಿನಿತ್ಯವೂ ಹೊಸ ಹೊಸ ವಿಚಾರಗಳನ್ನು ಆವಿಷ್ಕಾರ ಮಾಡುವ ಜೊತೆಗೆ ಜ್ಞಾನದ ಮಂಥನ ಮಾಡಿಕೊಂಡು ವಿದ್ಯಾರ್ಥಿಗಳಲ್ಲಿ ಕಲಿಕಾ ಶಕ್ತಿಯನ್ನು ಹೆಚ್ಚಿಸಿ ಮೌಲ್ಯಯುತ ಸಂಸ್ಕಾರವನ್ನು ನೀಡಲು ಪ್ರಾಮಾಣಿಕವಾಗಿ ಕೆಲಸ ಮಾಡುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಅಭ್ಯುದಯಕ್ಕೆ ನೆರವಾಗಬೇಕು ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವನೆಯನ್ನು ಮೂಡಿಸಿಕೊಳ್ಳುವ ದಿಕ್ಕಿನಲ್ಲಿ ಅರಿವಿನ ಜಾಗೃತಿಯನ್ನು ಮೂಡಿಸಲು ಮೂಲಕ ಶಿಕ್ಷಕರು ವಿದ್ಯಾರ್ಥಿಗಳ ಸಮಗ್ರವಾದ ವ್ಯಕ್ತಿತ್ವದ ವಿಕಸನಕ್ಕೆ ಮುನ್ನುಡಿ ಬರೆಯಬೇಕು ಎಂದು ಮನವಿ ಮಾಡಿದರು.

ಆದಿಚುಂಚನಗಿರಿ ಸಮೂಹ ಶಿಕ್ಷಣ ಸಂಸ್ಥೆಗಳ ಹೇಮಗಿರಿ ಶಾಖ ಮಠದ ವ್ಯಾಪ್ತಿಯ ಗೌರವ ಕಾರ್ಯದರ್ಶಿಗಳಾಗಿರುವ ಡಾ.ಜೆ.ಎ .ರಾಮಕೃಷ್ಣೇಗೌಡ ಅವರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆತು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಯಶಸ್ಸು ಮತ್ತು ಕೀರ್ತಿಯನ್ನು ಗಳಿಸಿ ಉತ್ತಮ ಸಾಧನೆ ಮಾಡಲು ನೆರವಾಗುವ ದಿಕ್ಕಿನಲ್ಲಿ, ಶಿಕ್ಷಕರಿಗೆ ಶೈಕ್ಷಣಿಕ ಕಾರ್ಯಗಾರವನ್ನು ಏರ್ಪಡಿಸಿ ಕಲಿಕೆಗೆ ನೆರವಾಗುವ ದಿಕ್ಕಿನಲ್ಲಿ ಮುಂದಾಗಿರುವುದು ಇಡೀ ನಾಗರಿಕ ಸಮಾಜವೇ ಮೆಚ್ಚುವ ವಿಚಾರವಾಗಿದೆ ಎಂದು ಹರೀಶ್ ಅಭಿಮಾನದಿಂದ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಹೇಮಗಿರಿ ಶಾಖಾ ಮಠದ ಗೌರವ ಕಾರ್ಯದರ್ಶಿಗಳಾದ ರಾಮಕೃಷ್ಣೇಗೌಡ ಮಾತನಾಡಿ ಬದಲಾಗುತ್ತಿರುವ ಕಾಲಘಟ್ಟಕ್ಕೆ ಸರಿಯಾಗಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡುವ ಶಿಕ್ಷಕರು ಕೂಡ ಹೆಚ್ಚಿನ ಜ್ಞಾನವಂತರಾಗುವುದು ಇಂದಿನ ಅವಶ್ಯಕತೆಯಾಗಿದೆ. ಶಿಕ್ಷಕರ ಬೋಧನೆಗೆ ಅನುಕೂಲ ವಾಗುವ ನಿಟ್ಟಿನಲ್ಲಿ ವಿಷಯ ತಜ್ಞರ ಮೂಲಕ ಶೈಕ್ಷಣಿಕ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ಎರಡು ದಿನಗಳ ಕಾಲ ನಡೆಯುತ್ತಿರುವ ಶೈಕ್ಷಣಿಕ ಕಾರ್ಯಾಗಾರದಲ್ಲಿ ಭಾಗವಹಿಸಿರುವ ಶಿಕ್ಷಕರು ಇಲ್ಲಿ ದೊರೆಯುವ ಶಿಕ್ಷಣದ ಚಿಂತನ-ಮAಥನದ ವಿಚಾರಗಳ ಮೂಲಕ ವಿದ್ಯಾರ್ಥಿಗಳಲ್ಲಿ ಸಂಸ್ಕಾರ ಹಾಗೂ ಪ್ರಜ್ಞಾವಂತಿಕೆಯನ್ನು ಬೆಳೆಸಿ ಗುಣಮಟ್ಟದ ಬೋಧನೆಗೆ ಮುಂದಾಗಬೇಕು ಎಂದು ರಾಮಕೃಷ್ಣೇಗೌಡ ಮನವಿ ಮಾಡಿದರು.
ಬೆಂಗಳೂರಿನಿAದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಪ್ರೊ.ಬಿ.ಎಂ.ಜಗಧೀಶ್ ಶೈಕ್ಷಣಿಕ ಕಾರ್ಯಾಗಾರದಲ್ಲಿ ಶಿಕ್ಷಕರ ಗುಣಮಟ್ಟದ ಬೋಧನೆಗೆ ನೆರವಾಗುವ ವೃತ್ತಿ ಕೌಶಲ್ಯ ಮಾರ್ಗದರ್ಶನ ನೀಡಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ಎಂ.ಕೆ.ಹರಿಚರಣತಿಲಕ್ ಹಾಗೂ ಕೆ.ಆರ್.ನೀಲಕಂಠ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ವರದಿ.ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ. ಮಂಡ್ಯ.

More Stories
ವಿದ್ಯಾರ್ಥಿಗಳು ಸೋಲನ್ನೇ ಗೆಲುವಿನ ಮೆಟ್ಟಿಲಾಗಿಸಿಕೊಂಡು ಸಾಧನೆ ಮಾಡಿ, ಅಂತಾರಾಷ್ಟ್ರೀಯ ಜಾನಪದ ಕಲಾವಿದ ಡಾ.ಅಮ್ಮ ರಾಮಚಂದ್ರ ಕರೆ.
ಕೆ. ಆರ್.ಪೇಟೆ ಪಟ್ಟಣದಲ್ಲಿ ಮಿಂಚಿನ ಸಂಚಾರ, ವಿವಿಧ ಹೋಟೆಲ್ ಗಳು ಹಾಗೂ ಬೇಕರಿಗಳ ಮೇಲೆ ದಾಳಿ, ಪ್ಲಾಸ್ಟಿಕ್ ಬಳಕೆಯ ವಿರುದ್ಧ ಜಾಗೃತಿ
ಮಾತೃಭೂಮಿ ವೃದ್ದಾಶ್ರಮದಲ್ಲಿ ವಯೋವೃದ್ಧನಿಗೆ ಶೇವಿಂಗ್ ಮಾಡಿ, ಕೇಶ ಮುಂಡನ ನಡೆಸಿ ಸ್ನಾನ ಮಾಡಿಸಿ ಸೇವೆ ಮಾಡಿ ಸಂಭ್ರಮಿಸಿದ ಪಾಂಡವಪುರ ಉಪ ವಿಭಾಗಾಧಿಕಾರಿ ಕೆ.ಆರ್. ಶ್ರೀನಿವಾಸ್..