ದಂಪತಿಯೊಬ್ಬರ ಮೃತದೇಹವನ್ನು ಒಂದೇ ಚಿತೆಯಲ್ಲಿ ಇರಿಸಿ ಅಂತ್ಯಸ0ಸ್ಕಾರ
Video link
ಭಟ್ಕಳ: ತಾಲೂಕಿನ ಅಳಿವೆಕೋಡಿ ಸಮುದ್ರ ತೀರದಲ್ಲಿ ಚಿಪ್ಪಿಕಲ್ಲು ತೆಗೆಯಲು ತೆರಳಿದ್ದ ವೇಳೆ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಪೈಕಿ ಒಂದೆ ಸ್ಥಳದಲ್ಲಿ ೮ ಮಂದಿಯ ಶವಗಳ ಸಾಮೂಹಿಕ ಅಂತ್ಯಸAಸ್ಕಾರ ಸೋಮವಾರ ಭಾವುಕ ವಾತಾವರಣದಲ್ಲಿ ನೆರವೇರಿತು. ಗ್ರಾಮದಲ್ಲಿ ಎಲ್ಲೆಡೆ ಶೋಕದ ಛಾಯೆ ಆವರಿಸಿತ್ತು.
ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಅಂತ್ಯಸAಸ್ಕಾರದ ವೇಳೆ ಮನಕಲಕುವ ದೃಶ್ಯಗಳು ಕಂಡುಬAದವು. ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಪೂರ್ಣಗೊಂಡ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ನಂತರ ಸಾರದಹೊಳೆಯಲ್ಲಿ ಸಾಮೂಹಿಕ ಅಂತ್ಯಸ0ಸ್ಕಾರ ನೆರವೇರಿಸಲಾಯಿತು.

ಒಂದೇ ಗ್ರಾಮದ ಹಲವರು ದುರಂತದಲ್ಲಿ ಮೃತಪಟ್ಟಿರುವುದು ಗ್ರಾಮಸ್ಥರನ್ನು ಕಂಬನಿ ಮಿಡಿಯುವಂತೆ ಮಾಡಿತು. ಮೃತರ ಅಂತಿಮ ದರ್ಶನಕ್ಕೆ ಸ್ಥಳೀಯರು, ಸಂಬAಧಿಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ಒಂದೇ ಕುಟುಂಬದ ಎಂಟು ಮಂದಿಯ ಅಂತ್ಯಸAಸ್ಕಾರ ಒಂದೇ ಸ್ಥಳದಲ್ಲಿ ನಡೆದಿದ್ದು ಅತ್ಯಂತ ಹೃದಯವಿದ್ರಾವಕ ದೃಶ್ಯಕ್ಕೆ ಸಾಕ್ಷಿಯಾಯಿತು. ಪರಿವಾರದವರ ಹಾಗೂ ಗ್ರಾಮಸ್ಥರ ಆಕ್ರಂದನ ಮನಕಲಕುವಂತಿತ್ತು. ದಂಪತಿಯೊಬ್ಬರ ಮೃತದೇಹವನ್ನು ಒಂದೇ ಚಿತೆಯಲ್ಲಿ ಇರಿಸಿ ಅಂತ್ಯಸAಸ್ಕಾರ ನೆರವೇರಿಸಿದ ದೃಶ್ಯ ಅಲ್ಲಿದ್ದವರ ಕಣ್ಣೀರನ್ನು ತರಿಸಿತು.
ದುರಂತ ನಡೆದ ದಿನ ೧೦ ಮೃತದೇಹಗಳು ಪತ್ತೆಯಾಗಿದ್ದವು. ಸೋಮವಾರ ಬೆಳಗ್ಗೆ ನಾಪತ್ತೆಯಾಗಿದ್ದ ಮಾದೇವ ನಾಯ್ಕ ಅವರ ಮೃತದೇಹವೂ ಪತ್ತೆಯಾಗಿದ್ದು, ಒಟ್ಟು ಸಾವಿನ ಸಂಖ್ಯೆ ೧೧ಕ್ಕೆ ಏರಿದೆ. ಮೃತದೇಹ ಪತ್ತೆಯಾದ ಬಳಿಕ ಕುಟುಂಬಸ್ಥರ ದುಃಖ ಮತ್ತಷ್ಟು ಮಡುಗಟ್ಟಿತು.
ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹಾಗೂ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಅವರು ಸರ್ಕಾರದಿಂದ ಅಗತ್ಯ ಪರಿಹಾರ ಹಾಗೂ ನೆರವು ನೀಡುವ ಭರವಸೆ ನೀಡಿದರು.

More Stories
ಮುರಿನಕಟ್ಟೆ ಧ್ವಂಸ ಪ್ರಕರಣ ಉದ್ವಿಗ್ನತೆ: ಠಾಣೆ ಎದುರು ಧರಣಿ, ಭಟ್ಕಳ-ಜಾಲಿಯಲ್ಲಿ 144 ಸೆಕ್ಷನ್ ಜಾರಿ
ಬಕ್ರೀದ್ ಹಿನ್ನೆಲೆ ಭಟ್ಕಳದಲ್ಲಿ ಕಟ್ಟೆಚ್ಚರ: ಮೇ 30ರವರೆಗೆ ಅಧಿಕಾರಿಗಳಿಗೆ ಕೇಂದ್ರ ಸ್ಥಾನದಲ್ಲೇ ಇರಲು ಸೂಚನೆ
ಮನೆ ಕಳ್ಳತನ ಪ್ರಕರಣ: 8 ಗಂಟೆಯೊಳಗೆ ಆರೋಪಿಗಳ ಬಂಧನ