ಭಟ್ಕಳ: ತಾಲೂಕಿನ ತಟ್ಟೆಹಕ್ಕಲು ಕಡಲತೀರದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸುವ ವೇಳೆ ನಡೆದ ದುರಂತದಲ್ಲಿ ಮೃತಪಟ್ಟವರ ಮನೆಗಳಿಗೆ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ದುರಂತದಲ್ಲಿ ಅಸುನೀಗಿದವರ ಕುಟುಂಬಗಳನ್ನು ಪ್ರತ್ಯೇಕವಾಗಿ ಭೇಟಿಯಾದ ಅವರು ದುಃಖ ಹಂಚಿಕೊAಡು ಧೈರ್ಯ ತುಂಬಿದರು. ಇದೇ ವೇಳೆ ಮೃತರ ಕುಟುಂಬಗಳಿಗೆ ವೈಯಕ್ತಿಕ ಧನಸಹಾಯ ನೀಡಿ ಮಾನವೀಯತೆ ಮೆರೆದರು.

ಈ ದುರ್ಘಟನೆ ಬಹಳ ನೋವು ತಂದಿದೆ. ಅಮಾಯಕ ಜೀವಗಳನ್ನು ಕಳೆದುಕೊಂಡಿರುವುದು ಅತ್ಯಂತ ದುಃಖಕರ ಸಂಗತಿ. ಕುಟುಂಬದ ಸದಸ್ಯರ ನೋವಿನಲ್ಲಿ ನಾವು ಸಹ ಭಾಗಿಯಾಗಿದ್ದೇವೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ, ಮುಖಂಡರಾದ ನಾಗಪ್ಪ ನಾಯ್ಕ, ರಾಜು ನಾಯ್ಕ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ