ಭಟ್ಕಳ: ನಾಯಿಯನ್ನು ಶೆಡ್‌ನೊಳಗೆ ಕರೆತಂದ ಸಣ್ಣ ವಿಷಯಕ್ಕೆ ಆರಂಭವಾದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ, ವ್ಯಕ್ತಿಯೊಬ್ಬರ ಮೇಲೆ ಬಿಯರ್ ಬಾಟಲಿಯಿಂದ ಭೀಕರವಾಗಿ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಭಟ್ಕಳ ನಗರದಲ್ಲಿ ನಡೆದಿದೆ.

ಘಟನೆಗೆ ಸಂಬAಧಿಸಿದAತೆ ಸಾಗರ ತಾಲ್ಲೂಕು ಮೂಲದ ದಿನೇಶ್ ಪರಶು ಮರಾಠ (28) ಎಂಬಾತನನ್ನು ಭಟ್ಕಳ ನಗರ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಘಟನೆಯ ವಿವರ:
ಸ್ಥಳೀಯ ನಿವಾಸಿ ಮೈನುದ್ದೀನ್ ಎಂಬುವವರು ನಾಯಿಯನ್ನು ಶೆಡ್‌ನಿಂದ ಹೊರಗೆ ಕರೆದೊಯ್ಯುವಂತೆ ದಿನೇಶ್ ಎಂಬಾತನಿಗೆ ಸೂಚಿಸಿದ್ದರು. ಈ ವೇಳೆ ಇಬ್ಬರ ನಡುವೆ ತೀವ್ರ ವಾಗ್ವಾದ ಉಂಟಾಗಿದೆ. ಜಗಳ ತಾರಕಕ್ಕೇರಿದಾಗ ಆಕ್ರೋಶಗೊಂಡ ಆರೋಪಿ ದಿನೇಶ್, ತನ್ನ ಕೈಯಲ್ಲಿದ್ದ ಖಾಲಿ ಬಿಯರ್ ಬಾಟಲಿಯಿಂದ ಮೈನುದ್ದೀನ್ ಅವರ ತಲೆಗೆ ಬಲವಾಗಿ ಹೊಡೆದಿದ್ದಾನೆ.

ಬಾಟಲಿ ತಲೆಗೆ ತಗುಲಿದ ರಭಸಕ್ಕೆ ಮೈನುದ್ದೀನ್ ಅವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುವಿನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.


ಘಟನೆ ನಡೆದ ಬೆನ್ನಲ್ಲೇ ಗಾಯಾಳುವಿನ ಪತ್ನಿ ಮುಬೀನಾ ಬಾನು ಅವರು ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿ ದಿನೇಶ್‌ನನ್ನು ಬಂಧಿಸಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ