ಬೆಂಗಳೂರು: ಭಟ್ಕಳ ಕ್ಷೇತ್ರದ ಮಾಜಿ ಶಾಸಕ ಜೆ.ಡಿ. ನಾಯ್ಕ ಅವರು ಇಂದು ಬೆಂಗಳೂರಿನಲ್ಲಿ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಶುಭಾಶಯ ಕೋರಿದ ಜೆ.ಡಿ. ನಾಯ್ಕ, ರಾಜ್ಯದ ಅಭಿವೃದ್ಧಿ ಹಾಗೂ ಜನಪರ ಆಡಳಿತಕ್ಕೆ ತಮ್ಮ ಶುಭ ಹಾರೈಕೆಗಳನ್ನು ತಿಳಿಸಿದರು. ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಅವರನ್ನೂ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ಭೇಟಿಯ ಸಂದರ್ಭದಲ್ಲಿ ರಾಜ್ಯದ ರಾಜಕೀಯ ಬೆಳವಣಿಗೆಗಳು, ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿ ಹಾಗೂ ಕ್ಷೇತ್ರದ ವಿವಿಧ ಜನಪರ ವಿಚಾರಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.







More Stories
ತಿರುಮಲ ಪ್ರಥಮ ಆರತಿ ಶಿಷ್ಟಾಚಾರ ಪ್ರಸ್ತಾಪ ಸ್ವಾಗತಾರ್ಹ: ಸಿಎಂ ನಿರ್ಧಾರ ಬೆಂಬಲಿಸಿದ ಟಿಟಿಡಿ ಸದಸ್ಯ ಎಸ್. ನರೇಶ್ ಕುಮಾರ್
ಬೆಂಗಳೂರು ಜಗನ್ನಾಥ ಭವನದಲ್ಲಿ ಬಿಜೆಪಿ ಒಬಿಸಿ ಮೋರ್ಚಾ ವಿಶೇಷ ಸಭೆ: ನೂತನ ಎಂಎಲ್ಸಿ ರಘು ಕೌಟಿಲ್ಯ ಅವರಿಗೆ ಅಭಿನಂದನೆ, ಶೀಘ್ರದಲ್ಲೇ ಬೃಹತ್ ಸಮಾವೇಶ
ಬೆಂಗಳೂರಿನಲ್ಲಿ ಸ್ವರ್ಣರಶ್ಮಿ ಕೌಶಲ್ಯಾಭಿವೃದ್ಧಿ ಸಂಸ್ಥೆಯ ನೂತನ ಕಟ್ಟಡದ ಭವ್ಯ ಶಿಲಾನ್ಯಾಸ: ಶ್ರೀ ಸ್ವರ್ಣವಲ್ಲಿ ಶ್ರೀಗಳಿಂದ ಚಾಲನೆ