ಭಟ್ಕಳ: ತಾಲೂಕಿನ ವಿವಿಧ ಭಾಗಗಳಲ್ಲಿ ಅಕ್ರಮವಾಗಿ ಓಸಿ (ಮಟ್ಕಾ) ಜೂಜಾಟ ನಡೆಸುತ್ತಿದ್ದ ಇಬ್ಬರ ವಿರುದ್ಧ ಗ್ರಾಮೀಣ ಹಾಗೂ ಮುರುಡೇಶ್ವರ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಅಳ್ವೆಕೊಡಿ ಸಣ್ಣಬಾವಿ ನಿವಾಸಿ ದೇವೇಂದ್ರ ಮಂಜುನಾಥ ನಾಯ್ಕ ಅವರು ಶಿರಾಲಿಯ ಚಿತ್ರಾಪುರ ಗೊಡಂಗಡಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಟ್ಕಾ ಜೂಜಾಟ ನಡೆಸಿ ಹಣ ಸಂಗ್ರಹಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಮುರುಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಮಾಳುಗ್ಗದೆ ಕಾಯ್ಕಿಣಿ ನಿವಾಸಿ ವಿಷ್ಣು ಜರ್ನಾದನ ನಾಯ್ಕ ಅವರು ಬಸ್ತಿ ಮೀನು ಮಾರ್ಕೆಟ್ ಪ್ರದೇಶದಲ್ಲಿ ಓಸಿ (ಮಟ್ಕಾ) ಜೂಜಾಟ ನಡೆಸುತ್ತಿದ್ದ ವೇಳೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ದಾಳಿ ವೇಳೆ ಆರೋಪಿಗಳಿಂದ ಜೂಜಾಟಕ್ಕೆ ಬಳಸುತ್ತಿದ್ದ ಚೀಟಿಗಳು, ನಗದು ಹಣ ಹಾಗೂ ಇತರೆ ಸಾಮಗ್ರಿಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.


ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಮಲ್ಲಿಕಾರ್ಜುನ ಕೊರಾಣಿ ಹಾಗೂ ಮುರುಡೇಶ್ವರ ಪೊಲೀಸ್ ಠಾಣೆಯ ಪಿಎಸ್ಐ ಹನುಮಂತ ಬಿರಾದಾರ ಅವರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
About The Author


More Stories
AITM ಭಟ್ಕಳದಲ್ಲಿ IPR ಮತ್ತು ಪೇಟೆಂಟ್ಗಳ ಕುರಿತು ರಾಷ್ಟ್ರೀಯ ಮಟ್ಟದ ಆನ್ಲೈನ್ ಕಾರ್ಯಾಗಾರ
ಸತತ 5ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಗೆದ್ದ ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜು
ಯಶಸ್ವಿಯಾಗಿ ನಡೆದ ಶಿರಾಲಿ ವಲಯ ಮಟ್ಟದ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟ: ಜನತಾ ವಿದ್ಯಾಲಯ ಸಮಗ್ರ ವೀರಾಗ್ರಣಿ