

ಭಟ್ಕಳ: ಕಪ್ಪೆಚಿಪ್ಪಿನ ದುರಂತದಲ್ಲಿ 11 ಮಂದಿ ಮೃತಪಟ್ಟ ಹಿನ್ನೆಲೆಯಲ್ಲಿ ಅವರ ಕುಟುಂಬಗಳಿಗೆ ಮಾನವೀಯ ನೆರವು ನೀಡುವ ಉದ್ದೇಶದಿಂದ ಭಟ್ಕಳ ತಾಲೂಕು ಆರ್ಯ ಈಡಿಗ ನಾಮಧಾರಿ ಬಿಲ್ಲವ ನೌಕರಿ ವೃಂದದ ವತಿಯಿಂದ ಸಂಗ್ರಹಿಸಲಾದ ಆರ್ಥಿಕ ಸಹಾಯಧನವನ್ನು ಸಂತ್ರಸ್ತ ಕುಟುಂಬಗಳಿಗೆ ವಿತರಿಸಲಾಯಿತು.
ಸಂಘಟನೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಸಂತ್ರಸ್ತ ಕುಟುಂಬಗಳ ಮನೆಗಳಿಗೆ ಖುದ್ದಾಗಿ ಭೇಟಿ ನೀಡಿ, ಒಟ್ಟು 9 ಕುಟುಂಬಗಳಿಗೆ ಸಂಗ್ರಹಿಸಲಾದ ನೆರವಿನ ಮೊತ್ತವನ್ನು ಸಮಾನವಾಗಿ ಹಂಚಿಕೆ ಮಾಡಿ ನೀಡಿದರು. ದುಃಖದ ಸಂದರ್ಭದಲ್ಲಿ ಸಮಾಜದ ವತಿಯಿಂದ ನೀಡಲಾದ ಈ ನೆರವು ಕುಟುಂಬಗಳಿಗೆ ಸಾಂತ್ವನ ಹಾಗೂ ಧೈರ್ಯ ತುಂಬುವ ಪ್ರಯತ್ನವಾಗಿದೆ ಎಂದು ಸಂಘಟನೆಯವರು ತಿಳಿಸಿದರು.

ಈ ಸಂದರ್ಭದಲ್ಲಿ ಸಿ.ಆರ್. ನಾಯ್ಕ, ಗೋಪಾಲ ನಾಯ್ಕ, ಮಂಜುನಾಥ ಎನ್. ನಾಯ್ಕ, ದೇವಿದಾಸ ನಾಯ್ಕ, ವಸಂತ ನಾಯ್ಕ, ವೆಂಕಟೇಶ ನಾಯ್ಕ, ರಾಮ ನಾಯ್ಕ ಸೇರಿದಂತೆ ಹಳೆಕೋಟೆ ದೇವಸ್ಥಾನದ ಅಧ್ಯಕ್ಷರು, ಕಾರ್ಯದರ್ಶಿಗಳು, ಮೊಕ್ತೇಸರರು ಹಾಗೂ ಸಂಘಟನೆಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

About The Author




More Stories
ತೆರೆದ ಚರಂಡಿ ಹೊಂಡ: ಅಪಾಯದ ನಡುವೆ ಭಟ್ಕಳದ ವಾಹನ ಸವಾರರ ಸಂಚಾರ.
ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಮಂಕಾಳ್ ಎಸ್. ವೈದ್ಯ ಆಯ್ಕೆ: ಮಾಜಿ ಸಚಿವರಿಗೆ ಭಟ್ಕಳದಲ್ಲಿ ಅದ್ಧೂರಿ ಸ್ವಾಗತ.
ಆಗಸ್ಟ್ 18ರಂದು ಭಟ್ಕಳದಲ್ಲಿ ಬೃಹತ್ ರಕ್ತದಾನ ಶಿಬಿರ: ಡಾ. ಸುರೇಶ ನಾಯಕ್ ಸ್ಮರಣಾರ್ಥ ಆಯೋಜನೆ