

ಕುಮಟಾ: ತಾಲ್ಲೂಕಿನ ಬರ್ಗಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಲಾಯಿತು.

ಕಾರ್ಯಕ್ರಮದ ನೇತೃತ್ವವನ್ನು ವಹಿಸಿದ್ದ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶಾರದಾ ನಾಯ್ಕ ಅವರು ವಿದ್ಯಾರ್ಥಿಗಳಿಗೆ ಯೋಗದ ಮಹತ್ವವನ್ನು ಸವಿಸ್ತಾರವಾಗಿ ವಿವರಿಸಿದರು. ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಯೋಗ ಎಷ್ಟು ಪೂರಕ ಎಂಬುದನ್ನು ತಿಳಿಸಿಕೊಟ್ಟ ಅವರು, ಪ್ರತಿಯೊಬ್ಬರೂ ನಿತ್ಯವೂ ಯೋಗಾಭ್ಯಾಸವನ್ನು ತಮ್ಮ ದಿನಚರಿಯಾಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳಿಗೆ ಸಾಮೂಹಿಕವಾಗಿ ವಿವಿಧ ಯೋಗಾಸನಗಳನ್ನು ಮಾಡಿಸಿ, ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯಾಧ್ಯಾಪಕರಾದ ಮಧುಕೇಶ್ವರ ನಾಯ್ಕ, ಸಂಸ್ಕೃತ ಅಧ್ಯಾಪಕರಾದ ಮಂಜುನಾಥ ಗಾಂವಕರ್ ಬರ್ಗಿ ಹಾಗೂ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಸಕ್ರಿಯವಾಗಿ ಯೋಗಾಭ್ಯಾಸದಲ್ಲಿ ಪಾಲ್ಗೊಂಡರು.

About The Author




More Stories
ಹಿರೇಗುತ್ತಿ ಹೈಸ್ಕೂಲಿನಲ್ಲಿ ಮಕ್ಕಳ ರಕ್ಷಣಾ ಕಾಯ್ದೆಗಳ ಅರಿವು ಜಾಗೃತಿ ಕಾರ್ಯಕ್ರಮ
ಹಿರೇಗುತ್ತಿ ಹೈಸ್ಕೂಲಿನಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ‘ವ್ಯಸನ ಮುಕ್ತ ದಿನಾಚರಣೆ’
ಮಿರ್ಜಾನ್ ಬಿಜಿಎಸ್ ಸೆಂಟ್ರಲ್ ಸ್ಕೂಲಿನಲ್ಲಿ ಭಕ್ತಿ-ಶ್ರದ್ಧೆಯಿಂದ ನಡೆದ ‘ಗುರು ಪೂರ್ಣಿಮೆ’ ಆಚರಣೆ