ಭಟ್ಕಳ: ಭಾರತ ಚುನಾವಣಾ ಆಯೋಗದ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿ, ಮತದಾರರ ಪಟ್ಟಿಯನ್ನು ನಿಖರಗೊಳಿಸಲು ಸಹಕರಿಸಬೇಕು ಎಂದು ಭಟ್ಕಳ ಎಸ್ಐಆರ್ ಮಾಸ್ಟರ್ ಟ್ರೈನರ್ ರಾಘವೇಂದ್ರ ಮಡಿವಾಳ ಕರೆ ನೀಡಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಸ್ವೀಪ್ ಕಾರ್ಯಕ್ರಮದ ಅಂಗವಾಗಿ ಸಂಜೀವಿನಿ ಒಕ್ಕೂಟದ ಪ್ರತಿನಿಧಿಗಳಿಗಾಗಿ ಆಯೋಜಿಸಿದ್ದ ಎಸ್ಐಆರ್ ಜನಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜೂನ್ 29ರಿಂದ ಜುಲೈ 30ರವರೆಗೆ ನಡೆಯುವ ಪರಿಷ್ಕರಣೆ ಅವಧಿಯಲ್ಲಿ ಮತಗಟ್ಟೆ ಅಧಿಕಾರಿಗಳು ವಿತರಿಸುವ ದ್ವಿಪ್ರತಿ ನಮೂನೆಗಳನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ ಸಲ್ಲಿಸಬೇಕು. ಮಾಹಿತಿ ತಪ್ಪಾಗಿ ನಮೂದಿಸಿದರೆ ಹೊಸ ಅರ್ಜಿ ಪಡೆಯಲು ಅವಕಾಶ ಇರುವುದಿಲ್ಲ. ಆದ್ದರಿಂದ ಅರ್ಜಿ ಭರ್ತಿ ಮಾಡುವಾಗ ಮತಗಟ್ಟೆ ಅಧಿಕಾರಿಗಳು ಅಥವಾ ತರಬೇತಿ ಪಡೆದ ಅಧಿಕೃತ ಸ್ವಯಂಸೇವಕರ ನೆರವು ಪಡೆಯುವುದು ಸೂಕ್ತ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಸಹಾಯಕ ಲೆಕ್ಕಾಧಿಕಾರಿ ರಾಜೇಶ ಮಹಾಲೆ, ವ್ಯವಸ್ಥಾಪಕ ಕರಿಯಪ್ಪ ನಾಯ್ಕ, ವಿಷಯ ನಿರ್ವಾಹಕ ರಾಘವೇಂದ್ರ ಪೂಜಾರಿ ಹಾಗೂ ಸಂಜೀವಿನಿ ಒಕ್ಕೂಟದ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶಾಂತಿಕಾ ನಾಯ್ಕ ಉಪಸ್ಥಿತರಿದ್ದರು.

About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ