ಭಟ್ಕಳ: ಆಯುಷ್ಮಾನ್ ಭಾರತ ಹಾಗೂ ಆರೋಗ್ಯ ಕರ್ನಾಟಕ (AB-ARK) ಯೋಜನೆಯ ರಾಜ್ಯಮಟ್ಟದ ಪ್ರಗತಿ ಮೌಲ್ಯಮಾಪನದಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯಕ್ಕೆ 37ನೇ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ ಭಟ್ಕಳ ತಾಲೂಕು ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯನ್ನು ಭಟ್ಕಳ ಆಟೋ ಚಾಲಕರ-ಮಾಲಕರ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಆಸ್ಪತ್ರೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಆಡಳಿತ ವೈದ್ಯಾಧಿಕಾರಿ ಡಾ. ಅರುಣಕುಮಾರ, ಮಕ್ಕಳ ತಜ್ಞ ಡಾ. ಸುರಕ್ಷಿತ ಶೆಟ್ಟಿ ಹಾಗೂ ಸಿಬ್ಬಂದಿ ವಿಶ್ವನಾಥ ಅವರನ್ನು ಸಂಘದ ಪದಾಧಿಕಾರಿಗಳು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಅಭಿನಂದಿಸಿದರು.
ಸನ್ಮಾನ ನೆರವೇರಿಸಿ ಮಾತನಾಡಿದ ಸಂಘದ ಅಧ್ಯಕ್ಷ ವೆಂಕಟೇಶ ನಾಯ್ಕ:“ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದೊರೆತಿರುವ ಈ ಗೌರವ ಇಡೀ ತಾಲೂಕಿನ ಜನತೆಗೆ ಹೆಮ್ಮೆಯ ಸಂಗತಿಯಾಗಿದೆ. ವೈದ್ಯರು ಮತ್ತು ಸಿಬ್ಬಂದಿ ವರ್ಗದವರ ಸತತ ಶ್ರಮವೇ ಈ ಸಾಧನೆಗೆ ಕಾರಣ. ಮುಂದಿನ ದಿನಗಳಲ್ಲೂ ಇದೇ ರೀತಿಯ ಸಮರ್ಪಣಾ ಮನೋಭಾವದಿಂದ ಸೇವೆ ಸಲ್ಲಿಸಿ, ತಾಲೂಕಿಗೆ ಮತ್ತಷ್ಟು ಪ್ರಶಸ್ತಿ-ಹಿರಿಮೆಗಳನ್ನು ತಂದುಕೊಡಲಿ.” ಎಂದರು.
ಈ ಶುಭ ಸಂದರ್ಭದಲ್ಲಿ ಆಟೋ ಚಾಲಕರ-ಮಾಲಕರ ಸಂಘದ ಪ್ರಮುಖರಾದ: ಉಪಾಧ್ಯಕ್ಷರು: ಶ್ರೀನಿವಾಸ ನಾಯ್ಕ, ಈಶ್ವರ ನಾಯ್ಕ, ಪ್ರಧಾನ ಕಾರ್ಯದರ್ಶಿ: ಮಾದೇವ ನಾಯ್ಕ, ಖಜಾಂಚಿ: ಲೋಕೇಶ ನಾಯ್ಕ, ಸದಸ್ಯರಾದ: ಫಯಾಜ್ ಸೇರಿದಂತೆ ಹಲವು ಆಟೋ ಚಾಲಕರು ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದು, ಆಸ್ಪತ್ರೆಯ ಸಿಬ್ಬಂದಿಗೆ ಶುಭ ಹಾರೈಸಿದರು.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ