ಕೆ.ಆರ್.ಪೇಟೆ (ಮಂಡ್ಯ): ಕೃಷ್ಣರಾಜಪೇಟೆ ಪಟ್ಟಣದ ಹೊರವಲಯದ ಹೇಮಗಿರಿ ರಸ್ತೆಯ ಜಲಸೂರು ಬೈಪಾಸ್ ಬಳಿ ಇರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಾಲಯದಲ್ಲಿ ಆಷಾಢ ಮಾಸದ ಎರಡನೇ ಶುಕ್ರವಾರದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು ವಿಜೃಂಭಣೆಯಿಂದ ನೆರವೇರಿದವು. ಕಂಗೊಳಿಸಿದ ತಾಯಿ ಶ್ರೀ ಚೌಡೇಶ್ವರಿ ದೇವಿಯ ದರ್ಶನ ಪಡೆಯಲು ಭಕ್ತಸಾಗರವೇ ಹರಿದುಬಂದಿತ್ತು.
ಈ ಪವಿತ್ರ ದಿನದಂದು ದೇವಿಗೆ ವಿಶೇಷ ‘ವಾರಾಹಿ ಅಲಂಕಾರ’ ಮಾಡಲಾಗಿತ್ತು. ಮುಂಜಾನೆಯಿಂದಲೇ ಆರಂಭವಾದ ಪೂಜೆ ಪುರಸ್ಕಾರಗಳು ಹಾಗೂ ಹೋಮ-ಹವನಗಳಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ತಾಯಿಯ ದರ್ಶನ ಪಡೆದು ಪುನೀತರಾದರು. ದರ್ಶನದ ಬಳಿಕ ಭಕ್ತಾದಿಗಳಿಗೆ ಅನ್ನಪ್ರಸಾದ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ದೇವಾಲಯ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹಾಗೂ ಉದ್ಯಮಿ ಕೆ.ಎಚ್.ಆರ್. ಚಂದ್ರಶೇಖರ್ ಮಾತನಾಡಿ, “ಬೇಡಿ ಬಂದ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಚೌಡೇಶ್ವರಿ ದೇವಿಯ ಅನುಗ್ರಹದಿಂದ ಆಷಾಢ ಶುಕ್ರವಾರದ ಪೂಜೆಗೆ ವಿಶೇಷ ಮಹತ್ವವಿದೆ. ಇಂದಿನ ಒತ್ತಡದ ಜೀವನದಲ್ಲಿ ಮಾನಸಿಕ ನೆಮ್ಮದಿ ಪಡೆಯಲು ದೇವರು ಮತ್ತು ಧರ್ಮದ ಮೊರೆ ಹೋಗುವುದು ಅನಿವಾರ್ಯ. ಸತ್ಯ, ನ್ಯಾಯ, ನೀತಿ ಹಾಗೂ ಧರ್ಮದ ಮಾರ್ಗದಲ್ಲಿ ಸಾಗಿದರೆ ಯಶಸ್ಸು ಸಾಧಿಸಲು ಸಾಧ್ಯ” ಎಂದು ತಿಳಿಸಿದರು. ಆಗಮಿಸಿದ ಭಕ್ತರಿಗೆ ಪುಳಿಯೋಗರೆ ಹಾಗೂ ಸಿಹಿ ಪೊಂಗಲ್ ಪ್ರಸಾದ ವಿತರಿಸಲಾಯಿತು.
ಪೂಜಾ ಕೈಂಕರ್ಯಗಳನ್ನು ವೇದಬ್ರಹ್ಮ ಶರತ್ ಆಚಾರ್ಯ ಹಾಗೂ ರವಿ ಶಾಸ್ತ್ರಿ ಅವರ ನೇತೃತ್ವದಲ್ಲಿ ಅತ್ಯಂತ ಶ್ರದ್ಧಾಭಕ್ತಿಗಳಿಂದ ನೆರವೇರಿಸಲಾಯಿತು.
ಈ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಎಚ್.ಟಿ. ಮಂಜು ದಂಪತಿ, ಮಾಜಿ ಸಚಿವ ಡಾ. ನಾರಾಯಣಗೌಡ ದಂಪತಿ, ಮಾಜಿ ಶಾಸಕರಾದ ಕೆ.ಬಿ. ಚಂದ್ರಶೇಖರ್, ಬಿ. ಪ್ರಕಾಶ್, KUIDFC ಮಾಜಿ ಅಧ್ಯಕ್ಷ ಎಂ.ಡಿ. ಕೃಷ್ಣಮೂರ್ತಿ, ಕರ್ನಾಟಕ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ. ನಾಗೇಂದ್ರ ಕುಮಾರ್, KPCC ಸದಸ್ಯ ಕಿಕ್ಕೇರಿ ಸುರೇಶ್, ಪುರಸಭೆ ಹಿರಿಯ ಸದಸ್ಯ ಡಿ. ಪ್ರೇಮ್ ಕುಮಾರ್, ಮಂಡ್ಯ ಹಾಲು ಒಕ್ಕೂಟದ ನಿರ್ದೇಶಕ ಡಾಲು ರವಿ, ಮನ್ ಮುಲ್ ಮಾಜಿ ಅಧ್ಯಕ್ಷ ಎಂ.ಬಿ. ಹರೀಶ್ ದಂಪತಿ, DCC ಬ್ಯಾಂಕ್ ನಿರ್ದೇಶಕ ಅಂಬರೀಶ್ ದಂಪತಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸಿ ತಾಯಿಯ ಕೃಪೆಗೆ ಪಾತ್ರರಾದರು.
ವರದಿ: ಡಾ. ಕೆ.ಆರ್. ನೀಲಕಂಠ, ಕೃಷ್ಣರಾಜಪೇಟೆ, ಮಂಡ್ಯ.

About The Author


More Stories
ಪೌರಕಾರ್ಮಿಕ ಮಹಿಳೆಯರಿಗೆ ಬಾಗಿನ ಸಮರ್ಪಣೆ, ರಾಕಿ ಕಟ್ಟಿ ಗೌರವಿಸಿದ ಕೆ.ಆರ್.ಪೇಟೆ ಬಿಜೆಪಿ
ಕ್ರೈಸ್ಟ್ ದಿ ಕಿಂಗ್ ಪಿಯು ಕಾಲೇಜಿನಲ್ಲಿ ವಿದ್ಯಾಜ್ಯೋತಿ ಸಮಾರಂಭ: ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ
ಪ್ರತಿ ಶನಿವಾರ ಹೋಬಳಿ ಮಟ್ಟದಲ್ಲಿ ‘ಪ್ರಜಾ ಸೇವಾ ಆಂದೋಲನ’: ಫಲಾನುಭವಿಗಳ ಮನೆ ಬಾಗಿಲಿಗೆ ಸರ್ಕಾರಿ ಸೇವೆ – ತಹಶೀಲ್ದಾರ್ ಶ್ರೇಯಸ್