

ಭಟ್ಕಳ: ಶಾಲಾ ವಾಹನಗಳ ನಿಯಮಬಾಹಿರ ಸಂಚಾರ ಹಾಗೂ ಸಂಚಾರ ನಿಯಮ ಉಲ್ಲಂಘನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಭಟ್ಕಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಾಲಾ ವಾಹನಗಳ ವಿರುದ್ಧ ಗುರುವಾರ ದಿಢೀರ್ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿ, ನಿಯಮ ಉಲ್ಲಂಘಿಸಿದ 5 ವಾಹನಗಳಿಗೆ ದಂಡ ವಿಧಿಸಲಾಗಿದೆ.
ಭಟ್ಕಳ ನಗರ ಠಾಣೆಯ ಪಿಎಸ್ಐ ನವೀನ್ ನಾಯ್ಕ ಹಾಗೂ ಪಿಎಸ್ಐ ತಿಮ್ಮಪ್ಪ ಎಸ್. ಅವರ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ ಪೊಲೀಸರು, ನಗರದ ವಿವಿಧ ಭಾಗಗಳಲ್ಲಿ ಸಂಚರಿಸುತ್ತಿದ್ದ ಶಾಲಾ ವಾಹನಗಳನ್ನು ತಡೆದು ಕೂಲಂಕಷವಾಗಿ ಪರಿಶೀಲಿಸಿದರು.
ತಪಾಸಣೆಯ ವೇಳೆ ಕೆಲವು ವಾಹನಗಳಲ್ಲಿ ಇನ್ಸುರೆನ್ಸ್ ಸೇರಿದಂತೆ ಕಡ್ಡಾಯವಾಗಿ ಇರಬೇಕಾದ ಅಗತ್ಯ ದಾಖಲೆಗಳು ಸಮರ್ಪಕವಾಗಿ ಇಲ್ಲದಿರುವುದು ಪತ್ತೆಯಾಯಿತು. ಈ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘಿಸಿದ ಒಟ್ಟು ಐದು ಶಾಲಾ ವಾಹನಗಳಿಗೆ ಸ್ಥಳದಲ್ಲೇ ದಂಡ ವಿಧಿಸಲಾಯಿತು.

ಪೊಲೀಸರ ಎಚ್ಚರಿಕೆ:
“ವಿದ್ಯಾರ್ಥಿಗಳ ಸುರಕ್ಷತೆ ನಮಗೆ ಅತ್ಯಂತ ಮುಖ್ಯ. ಶಾಲಾ ವಾಹನಗಳ ಚಾಲಕರು ಹಾಗೂ ಆಡಳಿತ ಮಂಡಳಿಯವರು ವಾಹನಗಳಿಗೆ ಸಂಬಂಧಿಸಿದ ಎಲ್ಲಾ ಅಗತ್ಯ ದಾಖಲೆಗಳನ್ನು ಸರಿಯಾಗಿ ಹೊಂದಿರಬೇಕು ಮತ್ತು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮಕ್ಕಳ ಸುರಕ್ಷತೆಯಲ್ಲಿ ಯಾವುದೇ ರಾಜಿ ಇಲ್ಲ. ನಿಯಮ ಉಲ್ಲಂಘಿಸುವ ವಾಹನಗಳ ವಿರುದ್ಧ ಮುಂದಿನ ದಿನಗಳಲ್ಲೂ ಇಂತಹ ವಿಶೇಷ ತಪಾಸಣಾ ಕಾರ್ಯಾಚರಣೆಗಳು ಮುಂದುವರಿಯಲಿವೆ,” ಎಂದು ಈ ಸಂದರ್ಭದಲ್ಲಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

About The Author




More Stories
ತೆರೆದ ಚರಂಡಿ ಹೊಂಡ: ಅಪಾಯದ ನಡುವೆ ಭಟ್ಕಳದ ವಾಹನ ಸವಾರರ ಸಂಚಾರ.
ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಮಂಕಾಳ್ ಎಸ್. ವೈದ್ಯ ಆಯ್ಕೆ: ಮಾಜಿ ಸಚಿವರಿಗೆ ಭಟ್ಕಳದಲ್ಲಿ ಅದ್ಧೂರಿ ಸ್ವಾಗತ.
ಆಗಸ್ಟ್ 18ರಂದು ಭಟ್ಕಳದಲ್ಲಿ ಬೃಹತ್ ರಕ್ತದಾನ ಶಿಬಿರ: ಡಾ. ಸುರೇಶ ನಾಯಕ್ ಸ್ಮರಣಾರ್ಥ ಆಯೋಜನೆ