

ಅಂಬೇಡ್ಕರ್ ವೃತ್ತ, ದೇಸಾಯಿ ಸರ್ಕಲ್ ಹಾಗೂ ಬಸವೇಶ್ವರ ವೃತ್ತಗಳಲ್ಲಿ ಸಿಗ್ನಲ್ ಇಲ್ಲದೆ ನಿತ್ಯ ನರಕಯಾತನೆ

ಪ್ರತ್ಯೇಕ ಟ್ರಾಫಿಕ್ ಪೊಲೀಸ್ ಠಾಣೆ, ಬೈಪಾಸ್ ರಸ್ತೆ ಹಾಗೂ ಅಥಣಿ ಜಿಲ್ಲಾ ಕೇಂದ್ರ ಘೋಷಣೆಗೆ ಎಂ. ಶರ್ಮಾ, ಪ್ರವೀಣ್ ನಾಯಕ್ ಆಗ್ರಹ

ಅಥಣಿ: ಬೆಳಗಾವಿ ಜಿಲ್ಲೆಯ ಅತಿ ದೊಡ್ಡ ತಾಲೂಕು ಕೇಂದ್ರವಾದ ಅಥಣಿಯಲ್ಲಿ ದಿನೇ ದಿನೇ ವಾಹನ ದಟ್ಟಣೆ ಮಿತಿಮೀರುತ್ತಿದ್ದು, ಸೂಕ್ತ ಸಂಚಾರ ವ್ಯವಸ್ಥೆಯಿಲ್ಲದೆ ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ಕಿರಿಕಿರಿ ಅನುಭವಿಸುತ್ತಿದ್ದಾರೆ.

ಪಟ್ಟಣದ ಪ್ರಮುಖ ಜಂಕ್ಷನ್‌ಗಳಾದ ಅಂಬೇಡ್ಕರ್ ವೃತ್ತ, ದೇಸಾಯಿ ಸರ್ಕಲ್ ಹಾಗೂ ಬಸವೇಶ್ವರ ವೃತ್ತಗಳಲ್ಲಿ ಟ್ರಾಫಿಕ್ ಸಿಗ್ನಲ್‌ಗಳೇ ಇಲ್ಲದಿರುವುದು ಸಂಚಾರ ಅಸ್ತವ್ಯಸ್ತಗೊಳ್ಳಲು ಪ್ರಮುಖ ಕಾರಣವಾಗಿದೆ. ಸುಗಮ ಸಂಚಾರಕ್ಕಾಗಿ ಪಟ್ಟಣಕ್ಕೆ ಪ್ರತ್ಯೇಕ ಟ್ರಾಫಿಕ್ ಪೊಲೀಸ್ ಠಾಣೆ, ಸ್ಪೀಡ್ ಬ್ರೇಕರ್‌ಗಳ ನಿರ್ಮಾಣ, ರಸ್ತೆ ಓವರ್ ಬ್ರಿಡ್ಜ್ ಅಗಲೀಕರಣ ಹಾಗೂ ಬೈಪಾಸ್ ರಸ್ತೆಯ ತಕ್ಷಣದ ನಿರ್ಮಾಣ ಅತ್ಯಗತ್ಯವಾಗಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.


ದಶಕಗಳ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಲಿ:
ಅಥಣಿ ಕೆರೆಯ ಅಭಿವೃದ್ಧಿ, ಮೋಟಗಿ ತೋಟ ಶಾಲೆಯಲ್ಲಿ 9 ಮತ್ತು 10ನೇ ತರಗತಿಗಳ ಆರಂಭ, ಹಾಗೂ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸುವುದು ಇಲ್ಲಿನ ಜನರ ದಶಕಗಳ ಬೇಡಿಕೆಯಾಗಿದೆ. ಇದರ ಜೊತೆಗೆ ಮುರುಗೇಂದ್ರ ಶಿವಯೋಗಿ ರೈಲ್ವೆ ನಿಲ್ದಾಣ, ಸಿದ್ಧೇಶ್ವರ ವಿಮಾನ ನಿಲ್ದಾಣ, ವಿವಿಧ ಜಿಲ್ಲಾ ಮಟ್ಟದ ಕಚೇರಿಗಳ ಸ್ಥಾಪನೆ ಹಾಗೂ ಅಥಣಿಯನ್ನು ಪ್ರತ್ಯೇಕ ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡಲು ಜನಪ್ರತಿನಿಧಿಗಳ ಮೇಲೆ ಒತ್ತಡ ಹೆಚ್ಚಾಗುತ್ತಿದೆ.
ಸಾಮಾಜಿಕ ಹೋರಾಟಗಾರ ಪ್ರವೀಣ್ ನಾಯಕ್ ಹಾಗೂ ‘ಕರ್ನಾಟಕ ಪರಿಶಿಷ್ಟ ಜಾತಿ–ಪರಿಶಿಷ್ಟ ಪಂಗಡ ಮಹಿಳಾ ಸಬಲೀಕರಣ ಹೋರಾಟ ಸಮಿತಿ (ರಿ.), ಬೆಂಗಳೂರು’ ಇದರ ರಾಜ್ಯ ಮಾಧ್ಯಮ ವಕ್ತಾರರಾದ ಮಹೇಶ್ ಎಮ್. ಶರ್ಮಾ ಅವರು ಮಾತನಾಡಿ, “ಬೆಳಗಾವಿ ಅಧಿವೇಶನದಲ್ಲಾದರೂ ಸರ್ಕಾರ ಅಥಣಿಯ ಈ ಶಾಶ್ವತ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು,” ಎಂದು ಗಂಭೀರವಾಗಿ ಆಗ್ರಹಿಸಿದ್ದಾರೆ.
ಮುಂದಿನ ದಿನಗಳಲ್ಲಿ ತಾಲೂಕು ಆಡಳಿತ, ಜಿಲ್ಲಾಡಳಿತ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅಥಣಿಯ ಈ ಸುದೀರ್ಘ ಬೇಡಿಕೆಗಳಿಗೆ ಸ್ಪಂದಿಸಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುತ್ತವೆಯೇ ಅಥವಾ ಯಥಾಸ್ಥಿತಿ ಮುಂದುವರಿಯುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ. ವರದಿ : ಮಹೇಶ ಶರ್ಮ
About The Author




More Stories
ಅಥಣಿಯ ಶಿವಯೋಗಿ ನಗರದಲ್ಲಿ ಮೂಲಭೂತ ಸೌಕರ್ಯಗಳ ಅಭಾವ: ಹೆದ್ದಾರಿಯಲ್ಲಿ ‘ಸ್ಪೀಡ್ ಬ್ರೇಕರ್’, ಶಾಲಾ ಮೇಲ್ದರ್ಜೆಗೆ ಸ್ಥಳೀಯರ ಉಗ್ರ ಆಗ್ರಹ.
ಅಥಣಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ: ರಾಜು ಡವರಿ ಅವರಿಂದ ಧ್ವಜಾರೋಹಣ
ಮದಭಾವಿಯಲ್ಲಿ ಸಡಗರದ ಸ್ವಾತಂತ್ರ್ಯ ದಿನಾಚರಣೆ: ವೀರಯೋಧರಿಂದ ಜಂಟಿ ಧ್ವಜಾರೋಹಣ