

ಭಟ್ಕಳ: ತಾಲೂಕಿನ ಪ್ರತಿಷ್ಠಿತ ಅಂಜುಮನ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ವಿದ್ಯಾರ್ಥಿಗಳಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR), ಮತದಾರರ ವಿವರಗಳ ಪರಿಶೀಲನೆ ಹಾಗೂ ಹೊಸ ಮತದಾರರ ನೋಂದಣಿ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಭಟ್ಕಳ ಕ್ಷೇತ್ರ ಶಿಕ್ಷಣ ಸಂಪನ್ಮೂಲ ವ್ಯಕ್ತಿ ರಾಘವೇಂದ್ರ ಎಸ್. ಮಡಿವಾಳ ಅವರು, “ದೇಶಾದ್ಯಂತ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯು ನಿಖರ ಹಾಗೂ ನವೀಕೃತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಲ್ಲಿ ಅತ್ಯಂತ ಪ್ರಮುಖವಾಗಿದೆ. ಪ್ರತಿಯೊಬ್ಬರೂ ತಮ್ಮ ಮತದಾರರ ವಿವರಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ, ನಿಗದಿತ ಅವಧಿಯೊಳಗೆ ಅಗತ್ಯ ನೋಂದಣಿ ಹಾಗೂ ತಿದ್ದುಪಡಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು,” ಎಂದು ತಿಳಿಸಿದರು.

ಅಲ್ಲದೆ, “ಯುವ ಮನಸ್ಸುಗಳೇ ದೇಶದ ಭವಿಷ್ಯ. 18 ವರ್ಷ ತುಂಬಿದ ಅರ್ಹ ಯುವ ಮತದಾರರು ತಡಮಾಡದೇ ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡು, ಪ್ರಜಾಪ್ರಭುತ್ವದ ಮಹಾ ಹಬ್ಬದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು,” ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಪ್ರೊ. ಮೊಹಮ್ಮದ್ ಯೂಸುಫ್ ಕೋಲಾ ವಹಿಸಿದ್ದರು.


ವೇದಿಕೆಯಲ್ಲಿ ಭಟ್ಕಳ ಮುಸ್ಲಿಂ ಯೂತ್ ಫೆಡರೇಶನ್‌ನ ಪ್ರಧಾನ ಕಾರ್ಯದರ್ಶಿ ಮುಬಾಶಿರ್ ಹಲ್ಲಾರೆ, ಪ್ರೊ. ಬಿ.ಎಚ್. ನದಾಫ್ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶದ (IQAC) ಸಂಯೋಜಕರಾದ ಪ್ರೊ. ಡಿ.ಎಸ್. ಪ್ರಭು ಉಪಸ್ಥಿತರಿದ್ದರು.
ಉರ್ವಾ ಕ್ವಾಜಿ ಅವರ ಕುರಾನ್ ಪಠಣದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ರಾಷ್ಟ್ರೀಯ ಸೇವಾ ಯೋಜನೆ (NSS) ಅಧಿಕಾರಿ ಪ್ರೊ. ದಾಮೋದರ್ ನಾಯಕ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಭಾಗ್ಯಾ ಗೌಡ ಅತಿಥಿಗಳನ್ನು ಪರಿಚಯಿಸಿದರು. ಮೊಹಮ್ಮದ್ ಗೌಸ್ ಧನ್ಯವಾದ ಸಮರ್ಪಿಸಿದರು. ಅಫಿಯಾ ಹಾಗೂ ಜ್ಯೋತಿ ಕಾರ್ಯಕ್ರಮವನ್ನು ಸೊಗಸಾಗಿ ನಿರೂಪಿಸಿದರು.
About The Author




More Stories
ತೆರೆದ ಚರಂಡಿ ಹೊಂಡ: ಅಪಾಯದ ನಡುವೆ ಭಟ್ಕಳದ ವಾಹನ ಸವಾರರ ಸಂಚಾರ.
ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಮಂಕಾಳ್ ಎಸ್. ವೈದ್ಯ ಆಯ್ಕೆ: ಮಾಜಿ ಸಚಿವರಿಗೆ ಭಟ್ಕಳದಲ್ಲಿ ಅದ್ಧೂರಿ ಸ್ವಾಗತ.
ಆಗಸ್ಟ್ 18ರಂದು ಭಟ್ಕಳದಲ್ಲಿ ಬೃಹತ್ ರಕ್ತದಾನ ಶಿಬಿರ: ಡಾ. ಸುರೇಶ ನಾಯಕ್ ಸ್ಮರಣಾರ್ಥ ಆಯೋಜನೆ