August 21, 2026

ಇಡುಗುಂಜಿ ಕ್ರಾಸ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ದೀಪಗಳು ಬಂದ್: ಜರೂರು ದುರಸ್ತಿಗೆ ರಾಷ್ಟ್ರೀಯ ಹೆದ್ದಾರಿ ಯೋಜನಾ ನಿರ್ದೇಶಕರಿಗೆ ತಾ.ಪಂ. ಪತ್ರ

ಹೊನ್ನಾವರ: ರಾಷ್ಟ್ರೀಯ ಹೆದ್ದಾರಿ 66ರ ಹೊನ್ನಾವರ ತಾಲೂಕಿನ ಕೆಳಗಿನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಇಡುಗುಂಜಿ ಕ್ರಾಸ್ ಬಳಿ ಅಳವಡಿಸಲಾಗಿರುವ ವಿದ್ಯುತ್ ದೀಪಗಳು (Street Lights) ಕೆಟ್ಟು ಹೋಗಿದ್ದು, ರಾತ್ರಿ ವೇಳೆ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಾಳಾಗಿರುವ ದೀಪಗಳನ್ನು ತಕ್ಷಣವೇ ದುರಸ್ತಿಗೊಳಿಸುವಂತೆ ಹೊನ್ನಾವರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು (EO), ರಾಷ್ಟ್ರೀಯ ಹೆದ್ದಾರಿ-66ರ ಯೋಜನಾ ನಿರ್ದೇಶಕರಿಗೆ ಅಧಿಕೃತ ಪತ್ರದ ಮೂಲಕ ಸೂಚನೆ ನೀಡಿದ್ದಾರೆ.

ಅಪಘಾತದ ಭೀತಿ: ಸಾರ್ವಜನಿಕರಿಂದ ಸಾಲು ಸಾಲು ದೂರು

ಇಡುಗುಂಜಿ ಕ್ರಾಸ್ ಪ್ರಸಿದ್ಧ ಧಾರ್ಮಿಕ ಕ್ಷೇತ್ರಕ್ಕೆ ತೆರಳುವ ಪ್ರಮುಖ ಜಂಕ್ಷನ್ ಆಗಿದ್ದು, ಇಲ್ಲಿ ಹೆದ್ದಾರಿಗೆ ಅಳವಡಿಸಲಾದ ಒಟ್ಟು 6 ವಿದ್ಯುತ್ ದೀಪಗಳು ಕಳೆದ ಕೆಲವು ದಿನಗಳಿಂದ ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದಾಗಿ ರಾತ್ರಿ ವೇಳೆಯಲ್ಲಿ ಕತ್ತಲು ಆವರಿಸುತ್ತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗುವುದರ ಜೊತೆಗೆ ಅಪಘಾತಗಳು ಸಂಭವಿಸುವ ಭೀತಿ ಎದುರಾಗಿದೆ.

ಈ ಕುರಿತು ಸ್ಥಳೀಯ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ ವ್ಯಾಪಕ ದೂರುಗಳು ಸ್ವೀಕೃತವಾಗಿದ್ದವು. ಸಾರ್ವಜನಿಕರ ದೂರಿನ ಆಧಾರದ ಮೇಲೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಜರೂರಾಗಿ ಗಮನಹರಿಸಿ, ತಕ್ಷಣವೇ ಹೆದ್ದಾರಿ ಪ್ರಾಧಿಕಾರವು ಸ್ಥಳಕ್ಕೆ ಭೇಟಿ ನೀಡಿ ವಿದ್ಯುತ್ ದೀಪಗಳನ್ನು ಸರಿಪಡಿಸಬೇಕೆಂದು ದಿನಾಂಕ 19/08/2026 ರಂದು ಪತ್ರ ಬರೆದು ಆಗ್ರಹಿಸಿದ್ದಾರೆ.

ಈ ಸಮಸ್ಯೆಯ ಗಂಭೀರತೆಯನ್ನು ಪರಿಗಣಿಸಿ, ಪತ್ರದ ಪ್ರತಿಗಳನ್ನು ಉತ್ತರ ಕನ್ನಡ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳು (DC) ಹಾಗೂ ಜಿಲ್ಲಾ ಪಂಚಾಯತ್ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ (CEO) ಮಾಹಿತಿಗಾಗಿ ಗೌರವಪೂರ್ವಕವಾಗಿ ಸಲ್ಲಿಸಲಾಗಿದೆ. ಹೆದ್ದಾರಿ ಪ್ರಾಧಿಕಾರವು ಶೀಘ್ರವೇ ಸ್ಪಂದಿಸಿ ದೀಪಗಳನ್ನು ಸರಿಪಡಿಸಲಿದೆಯೇ ಎಂಬುದನ್ನು ಸಾರ್ವಜನಿಕರು ಕಾಯ್ದುನೋಡುತ್ತಿದ್ದಾರೆ.

About The Author

error: Content is protected !!