ಹೊನ್ನಾವರ: ತಾಲೂಕಿನ ಆರೊಳ್ಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಹಾಲು ತುಂಬಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ ನಡೆದಿದೆ.
ಅಪಘಾತದ ವಿವರ: ಗೇರುಸೊಪ್ಪ ಕಡೆಯಿಂದ ಹೊನ್ನಾವರ ಕಡೆಗೆ ತೆರಳುತ್ತಿದ್ದ ಟ್ಯಾಂಕರ್, ಆರೊಳ್ಳಿ ಸಮೀಪದ ತಿರುವಿನಲ್ಲಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ.
ಆಸ್ತಿ ಪಾಸ್ತಿ ಹಾನಿ: ಹೆದ್ದಾರಿ ಬದಿಯಲ್ಲಿ ನಿಲ್ಲಿಸಲಾಗಿದ್ದ ಸ್ಕೂಟಿಯೊಂದು ಟ್ಯಾಂಕರ್ ತಳಭಾಗದಲ್ಲಿ ಸಿಲುಕಿ ಸಂಪೂರ್ಣವಾಗಿ ಜಖಂಗೊಂಡಿದೆ. ಅದೃಷ್ಟವಶಾತ್ ಟ್ಯಾಂಕರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ವಿದ್ಯುತ್ ವ್ಯತ್ಯಯ ಹಾಗೂ ಸಂಚಾರ ಸುಗಮ: ಅಪಘಾತದ ರಭಸಕ್ಕೆ ವಿದ್ಯುತ್ ಕಂಬ ಮುರಿದುಬಿದ್ದಿದ್ದರಿಂದ ಸುತ್ತಮುತ್ತಲಿನ ಗ್ರಾಮೀಣ ಭಾಗಗಳಲ್ಲಿ ಕೆಲ ಗಂಟೆಗಳ ಕಾಲ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಟ್ಯಾಂಕರ್ ಪಲ್ಟಿಯಾದ ಪರಿಣಾಮ ಹಾಲೆಯಲ್ಲ ರಸ್ತೆಯಲ್ಲಿ ಹರಿದುಹೋಗಿದೆ.

ಪೋಲಿಸ್ ಭೇಟಿ: ಘಟನಾ ಸ್ಥಳಕ್ಕೆ ಆಗಮಿಸಿದ ಹೊನ್ನಾವರ ಪೊಲೀಸರು ಪರಿಶೀಲನೆ ನಡೆಸಿ, ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ವರದಿ : ವಿಶ್ವನಾಥ ಸಾಲ್ಕೋಡ ಹೊನ್ನಾವರ
About The Author


More Stories
“ನೇತ್ರದಾನ ಶ್ರೇಷ್ಠ ದಾನ” – ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ
ಪರಿಸರ ಸೂಕ್ಷ್ಮ ವಲಯ (ESZ) ಅಧಿಸೂಚನೆ ವಿರೋಧಿಸಿ ಕೇಂದ್ರಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಲು ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿ ಕರೆ
ಸರ್ವೇ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ರಾಮಚಂದ್ರ ಎನ್. ಶೆಟ್ಟಿ ನಿಧನ