ಭಟ್ಕಳ: ಯೂನಿಯನ್ ಬ್ಯಾಂಕ್ ಭಟ್ಕಳ ಶಾಖೆಯ ಪ್ರಾಯೋಜಕತ್ವದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
ಕಿರಿಯ ಹಾಗೂ ಹಿರಿಯ ವಿಭಾಗಗಳಲ್ಲಿ ಪ್ರತ್ಯೇಕವಾಗಿ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಎಲ್ಲಾ ತಂಡಗಳು ತೀವ್ರ ಪೈಪೋಟಿಯೊಂದಿಗೆ ಉತ್ಸಾಹದಿಂದ ಭಾಗವಹಿಸಿದವು.
ವಿಜೇತ ತಂಡಗಳು:
ಹಿರಿಯರ ವಿಭಾಗ: ಯೂನಿಯನ್ ಬ್ಯಾಂಕ್ ತಂಡ ಪ್ರಥಮ ಸ್ಥಾನ ಹಾಗೂ ಕೆನರಾ ಬ್ಯಾಂಕ್ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು.

ಕಿರಿಯರ ವಿಭಾಗ: ವಾಹನ ಸಾಲ ತಂಡ ಪ್ರಥಮ ಸ್ಥಾನ ಗಳಿಸಿದರೆ, ಗೃಹ ಸಾಲ ತಂಡ ದ್ವಿತೀಯ ಸ್ಥಾನ ಗಳಿಸಿತು.
ವಿಜೇತ ಹಾಗೂ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ನಾಳೆ ಮಧ್ಯಾಹ್ನ 2 ಗಂಟೆಗೆ ಯೂನಿಯನ್ ಬ್ಯಾಂಕ್ ವತಿಯಿಂದ ಬಹುಮಾನ ವಿತರಿಸಲಾಗುವುದು.
ವಿದ್ಯಾರ್ಥಿಗಳಿಗೆ ಅರ್ಥಪೂರ್ಣ ಸ್ಪರ್ಧೆ ಆಯೋಜಿಸಿದ ಯೂನಿಯನ್ ಬ್ಯಾಂಕ್ ಭಟ್ಕಳ ಶಾಖೆಗೆ ಶಾಲಾ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಧನ್ಯವಾದ ಅರ್ಪಿಸಿದ್ದಾರೆ.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ