September 8, 2026

ಪ್ರತಿ ಶನಿವಾರ ಹೋಬಳಿ ಮಟ್ಟದಲ್ಲಿ ‘ಪ್ರಜಾ ಸೇವಾ ಆಂದೋಲನ’: ಫಲಾನುಭವಿಗಳ ಮನೆ ಬಾಗಿಲಿಗೆ ಸರ್ಕಾರಿ ಸೇವೆ – ತಹಶೀಲ್ದಾರ್ ಶ್ರೇಯಸ್

ಕೃಷ್ಣರಾಜಪೇಟೆ (ಮಂಡ್ಯ): ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮವನ್ನು ಪ್ರತಿ ಶನಿವಾರ ತಾಲೂಕಿನ ವಿವಿಧ ಹೋಬಳಿ ಕೇಂದ್ರಗಳಲ್ಲಿ ನಡೆಸುವ ಮೂಲಕ ಸರ್ಕಾರದ ಯೋಜನೆಗಳನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸಲಾಗುತ್ತಿದೆ ಎಂದು ತಹಶೀಲ್ದಾರ್ ಶ್ರೇಯಸ್ ತಿಳಿಸಿದರು.

ಕೃಷ್ಣರಾಜಪೇಟೆ ತಾಲೂಕಿನ ಬೂಕನಕೆರೆ ಹೋಬಳಿ ಕೇಂದ್ರದ ಗ್ರಾಮ ಪಂಚಾಯಿತಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಜನರ ಅಹವಾಲುಗಳನ್ನು ಆಲಿಸಿ ಪಿಂಚಣಿ, ಪಹಣಿ ತಿದ್ದುಪಡಿ, ವಸತಿ ನಿವೇಶನ ಹಾಗೂ ಗ್ಯಾರಂಟಿ ಯೋಜನೆಗಳ 5 ಸೇವೆಗಳು ಸೇರಿದಂತೆ ವಿವಿಧ ಇಲಾಖಾ ಸೌಲಭ್ಯಗಳನ್ನು ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇರವಾಗಿ ನೀಡಲಾಗುವುದು. ಶ್ರೀಸಾಮಾನ್ಯರು ಹಾಗೂ ರೈತರು ಈ ಆಂದೋಲನದ ಸದ್ಬಳಕೆ ಮಾಡಿಕೊಳ್ಳಬೇಕೆಂದು ತಹಶೀಲ್ದಾರ್ ಮನವಿ ಮಾಡಿದರು.

ಸೌಲಭ್ಯ ವಿತರಣೆ: ಸಮಾಜ ಕಲ್ಯಾಣ, ಕೃಷಿ, ತೋಟಗಾರಿಕೆ, ಅರಣ್ಯ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಆರ್‌ಡಿಪಿಆರ್ ಸೇರಿದಂತೆ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು.

ಉಪಸ್ಥಿತಿ: ತಾಲೂಕು ಪಂಚಾಯಿತಿ ಇಒ ಸುಷ್ಮಾ, ಇನ್ಸ್ಪೆಕ್ಟರ್ ಮಹೇಶ್, ಆರ್‌ಎಫ್‌ಒ ಅನಿತಾ, ಸಮಾಜ ಕಲ್ಯಾಣ ಇಲಾಖೆಯ ಎಡಿ ದಿವಾಕರ್, ಟಿಹೆಚ್‌ಒ ಡಾ. ಅಜಿತ್, ಡಾ. ಶ್ರೀನಿವಾಸ್ ಗೌಡ, ಉಪ ತಹಶೀಲ್ದಾರ್ ಜಗಧೀಶ್, ಆರ್‌ಐ ಚಂದ್ರಕಲಾ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದ್ದರು.

    About The Author

    error: Content is protected !!