September 8, 2026

ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ

ಯಲ್ಲಾಪುರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು (ರಿ.), ಬೆಂಗಳೂರು–ಜಿಲ್ಲಾ ಘಟಕ ಉತ್ತರ ಕನ್ನಡ ವತಿಯಿಂದ ಆಯೋಜಿಸಿದ್ದ ‘ಸಾಂಸ್ಕೃತಿಕ ವೈಭವ’ ಕಾರ್ಯಕ್ರಮದಲ್ಲಿ ಭಟ್ಕಳದ ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಶಸ್ತಿ ಪ್ರದಾನ ಹಾಗೂ ಶ್ಲಾಘನೆ: ಯಲ್ಲಾಪುರದ ಅಡಿಕೆ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಶಾಸಕ ಶಿವರಾಮ ಹೆಬ್ಬಾರ್ ಅವರು ನಿನಾದ ಕಲ್ಚರಲ್ ಅಕಾಡೆಮಿಯ ಪರವಾಗಿ ಉಮೇಶ ಮುಂಡಳ್ಳಿ, ರೇಷ್ಮಾ ಉಮೇಶ ಹಾಗೂ ನಿನಾದ ಉತ್ಥಾನ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಮಕ್ಕಳ ಸರ್ವತೋಮುಖ ಬೆಳವಣಿಗೆಗಾಗಿ ಸಂಸ್ಥೆ ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ. ಪ್ರಶಸ್ತಿಗಳು ಸಂಸ್ಥೆ ಹಾಗೂ ಕಲಾವಿದರ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ ಎಂದು ಶಾಸಕರು ಅಭಿಪ್ರಾಯಪಟ್ಟರು.

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ಬಿ.ಕೆ. ಶಿವಲೀಲಾ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಂತೋಷಕುಮಾರ ಪಾಟೀಲ, ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ, ಪತ್ರಕರ್ತ ಸುಬ್ರಾಯ ಬಿದ್ರಮನೆ, ಸಂಸ್ಥಾಪಕ ರಾಜ್ಯಾಧ್ಯಕ್ಷೆ ರಮಾ ಆರ್., ಗೌರವಾಧ್ಯಕ್ಷ ಬಿ.ಎನ್. ಕಲ್ಲಣ್ಣನವರ್, ಪ್ರಧಾನ ಕಾರ್ಯದರ್ಶಿ ಪರ್ವಿನ್ ಬಾನು ಬುಳ್ಳಣ್ಣನವರ್ ಉಪಸ್ಥಿತರಿದ್ದರು.

    ಶ್ರೀಶೈಲ ಐನಾಪುರ ಸ್ವಾಗತಿಸಿದ ಕಾರ್ಯಕ್ರಮದಲ್ಲಿ, ಸಭಾ ಕಾರ್ಯಕ್ರಮದ ನಂತರ ಶಿಕ್ಷಕರಿಂದ ಗುಮಟೆಪಾಂಗ್ ಸೇರಿದಂತೆ ವಿವಿಧ ಜನಪದ ಕಲಾಪ್ರಕಾರಗಳ ಪ್ರದರ್ಶನ ಜರುಗಿತು.

    About The Author

    error: Content is protected !!