ಭಟ್ಕಳ: ತಾಲೂಕಿನ ಸಿದ್ಧಾರ್ಥ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ 2026-27ನೇ ಶೈಕ್ಷಣಿಕ ಸಾಲಿನ ಪಿಯು ವಿದ್ಯಾರ್ಥಿಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜು ಸತತ ಐದನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಕಾಲೇಜಿನ ವಿದ್ಯಾರ್ಥಿಗಳು ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ವಿವಿಧ ಅಥ್ಲೆಟಿಕ್ಸ್, ಈಜು, ಗುಡ್ಡಗಾಡು ಓಟ ಸೇರಿದಂತೆ ಹಲವು ಕ್ರೀಡಾ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ತೋರಿ ಗಮನ ಸೆಳೆದಿದ್ದಾರೆ. ಬಾಲಕರ ವಿಭಾಗದಲ್ಲಿಯೂ ಕಾಲೇಜು ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದು, ಬಾಲಕಿಯರ ವಿಭಾಗದಲ್ಲಿಯೂ ಸಮಗ್ರ ವೀರಾಗ್ರಣಿ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.
ಬಾಲಕರ ವಿಭಾಗದಲ್ಲಿ ಜಯಂತ ಮರಾಠಿ ಅವರು 800 ಮೀ., 1500 ಮೀ. ಓಟ, 400 ಮೀ. ಹರ್ಡಲ್ಸ್, 4×400 ಮೀ. ರಿಲೇ ಹಾಗೂ ಗುಡ್ಡಗಾಡು ಓಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಅಕ್ಷಯ ಎನ್. ಕೆಲಿಸ್ ಅವರು 200 ಮೀ., 400 ಮೀ. ಓಟ, 4×100 ಮೀ. ಹಾಗೂ 4×400 ಮೀ. ರಿಲೇ ಮತ್ತು ಟ್ರಿಪಲ್ ಜಂಪ್‌ನಲ್ಲಿ ಪ್ರಥಮ ಸ್ಥಾನ ಪಡೆದು ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿ ಪಡೆದಿದ್ದಾರೆ.
ಶಿವರಾಜ ಮೊಗೇರ 100 ಮೀ. ಹರ್ಡಲ್ಸ್ ಹಾಗೂ 4×100 ಮೀ. ರಿಲೇಯಲ್ಲಿ ಪ್ರಥಮ ಮತ್ತು 400 ಮೀ. ಹರ್ಡಲ್ಸ್‌ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅಜಯ ನಾಯ್ಕ 400 ಮೀ. ಓಟದಲ್ಲಿ ತೃತೀಯ ಹಾಗೂ 4×400 ಮೀ. ರಿಲೇಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಸುಜಲ್ ಎಸ್. ಗಣಾಚಾರಿ 3000 ಮೀ. ಓಟದಲ್ಲಿ ದ್ವಿತೀಯ ಹಾಗೂ ಗುಡ್ಡಗಾಡು ಓಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ವಿಕ್ಷೀತ್ ಖಾರ್ವಿ 1500 ಮೀ. ಓಟದಲ್ಲಿ ದ್ವಿತೀಯ, ಗುಡ್ಡಗಾಡು ಓಟ ಹಾಗೂ 100 ಮೀ. ಬಟರ್‌ಫ್ಲೈ ಈಜಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಫಯಿಮ್ ಗುಂಡು ಎಸೆತದಲ್ಲಿ ಪ್ರಥಮ, ಜಾವಲಿನ್ ಎಸೆತದಲ್ಲಿ ತೃತೀಯ ಹಾಗೂ ಹೆಮರ್ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಇದೇ ವೇಳೆ ಹಲವು ವಿದ್ಯಾರ್ಥಿಗಳು ರಿಲೇ, ಜಿಗಿತ ಹಾಗೂ ಈಜು ಸ್ಪರ್ಧೆಗಳಲ್ಲೂ ಪ್ರಶಸ್ತಿ ಗಳಿಸಿದ್ದಾರೆ.
ಬಾಲಕರ ಗುಂಪು ಆಟಗಳಾದ ಬಾಲ್ ಬ್ಯಾಡ್ಮಿಂಟನ್, ಖೋ-ಖೋ, ಕಬಡ್ಡಿ, ವಾಲಿಬಾಲ್, ಶಟಲ್ ಬ್ಯಾಡ್ಮಿಂಟನ್ ಹಾಗೂ ತ್ರೋಬಾಲ್‌ನಲ್ಲಿಯೂ ಕಾಲೇಜು ತಂಡಗಳು ಪ್ರಥಮ ಸ್ಥಾನ ಪಡೆದುಕೊಂಡಿವೆ.
ಬಾಲಕಿಯರ ವಿಭಾಗದಲ್ಲಿಯೂ ಕಾಲೇಜಿನ ವಿದ್ಯಾರ್ಥಿನಿಯರು ಗಮನಾರ್ಹ ಸಾಧನೆ ಮಾಡಿದ್ದಾರೆ. ಮೇಘನಾ ಎಂ. ನಾಯ್ಕ 800 ಮೀ., 1500 ಮೀ., 3000 ಮೀ., 4×400 ಮೀ. ರಿಲೇ ಹಾಗೂ ಗುಡ್ಡಗಾಡು ಓಟದಲ್ಲಿ ಪ್ರಥಮ ಸ್ಥಾನ ಪಡೆದು ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿ ಪಡೆದಿದ್ದಾರೆ.
ಧನ್ಯಾ ಗೊಂಡ 200 ಮೀ. ಓಟ, 4×100 ಮೀ. ರಿಲೇ ಹಾಗೂ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಸೌಜನ್ಯ ಡಿ. ಹರಿಕಾಂತ 100 ಮೀ. ಓಟದಲ್ಲಿ ಪ್ರಥಮ ಹಾಗೂ ತ್ರಿವಿಧ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಬಿಂದುಶ್ರೀ ಕೆ. ದೇವಾಡಿಗ 400 ಮೀ. ಓಟ, 4×100 ಮೀ. ಮತ್ತು 4×400 ಮೀ. ರಿಲೇ ಹಾಗೂ ಗುಡ್ಡಗಾಡು ಓಟದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಅನೂಷಾ ವಿ. ದೇವಾಡಿಗ 400 ಮೀ. ಓಟದಲ್ಲಿ ದ್ವಿತೀಯ ಹಾಗೂ 4×400 ಮೀ. ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಹಿತಾಶ್ರೀ ಕೆ. ಗೊಂಡ 800 ಮೀ. ಓಟದಲ್ಲಿ ದ್ವಿತೀಯ ಹಾಗೂ 400 ಮೀ. ಹರ್ಡಲ್ಸ್ ಮತ್ತು ಗುಡ್ಡಗಾಡು ಓಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಯಶ್ಮಿತಾ ಎಂ. ದೇವಾಡಿಗ 4×400 ಮೀ. ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ರಕ್ಷಾ ಎಸ್. ನಾಯ್ಕ ಜಾವಲಿನ್ ಹಾಗೂ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದರೆ, ಯಶಸ್ವಿನಿ ನಾಯ್ಕ 4×400 ಮೀ. ರಿಲೇ, ತ್ರಿವಿಧ ಜಿಗಿತದಲ್ಲಿ ಪ್ರಥಮ ಹಾಗೂ ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಬಾಲಕಿಯರ ಖೋ-ಖೋ, ತ್ರೋಬಾಲ್, ಕಬಡ್ಡಿ, ಶಟಲ್ ಬ್ಯಾಡ್ಮಿಂಟನ್ ಹಾಗೂ ವಾಲಿಬಾಲ್ ತಂಡಗಳು ಸಹ ಪ್ರಥಮ ಸ್ಥಾನ ಪಡೆದಿವೆ.
ಯೋಗ ಸ್ಪರ್ಧೆಯಲ್ಲಿ ಶ್ರಾವ್ಯಾ ರಾಜು ನಾಯ್ಕ ಪ್ರಥಮ ಸ್ಥಾನ ಪಡೆದಿದ್ದಾರೆ. ಕರಾಟೆಯಲ್ಲಿ ಬಾಣೇಶ್ವರಿ ಎಂ. ನಾಯ್ಕ ಹಾಗೂ ಯಶಸ್ವಿನಿ ಪಿ. ನಾಯ್ಕ ಪ್ರಥಮ ಸ್ಥಾನ ಪಡೆದಿದ್ದು, ಟೆಕ್ವಾಂಡೋ ವಿಭಾಗದಲ್ಲಿಯೂ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿದ್ದಾರೆ. ಚೆಸ್ ವಿಭಾಗದಲ್ಲಿ ಸ್ಫೂರ್ತಿ ಆರ್. ಶೆಟ್ ತೃತೀಯ ಹಾಗೂ ಪ್ರೇರಣಾ ಎಸ್. ಶೆಟ್ ಐದನೇ ಸ್ಥಾನ ಪಡೆದಿದ್ದಾರೆ.
ಬಾಲಕರ ಕರಾಟೆ ವಿಭಾಗದಲ್ಲಿಯೂ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು, ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಪಡೆದುಕೊಂಡಿದ್ದಾರೆ. ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರಿದ ಎಲ್ಲಾ ವಿದ್ಯಾರ್ಥಿಗಳನ್ನು ಭಟ್ಕಳ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷರಾದ ಶ್ರೀ ಸುರೇಂದ್ರ ಶಾನಭಾಗ, ಪ್ರಾಂಶುಪಾಲರಾದ ಡಾ. ವಿರೇಂದ್ರ ವಿ. ಶಾನಭಾಗ, ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ಕೃಷ್ಣಪ್ಪ ನಾಯ್ಕ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
About The Author


More Stories
AITM ಭಟ್ಕಳದಲ್ಲಿ IPR ಮತ್ತು ಪೇಟೆಂಟ್ಗಳ ಕುರಿತು ರಾಷ್ಟ್ರೀಯ ಮಟ್ಟದ ಆನ್ಲೈನ್ ಕಾರ್ಯಾಗಾರ
ಯಶಸ್ವಿಯಾಗಿ ನಡೆದ ಶಿರಾಲಿ ವಲಯ ಮಟ್ಟದ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟ: ಜನತಾ ವಿದ್ಯಾಲಯ ಸಮಗ್ರ ವೀರಾಗ್ರಣಿ
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ