September 11, 2026

ಭಟ್ಕಳದಲ್ಲಿ “ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನ” ಜಾಗೃತಿ ಕಾರ್ಯಕ್ರಮ ಯಶಸ್ವಿ

ಭಟ್ಕಳ: ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ (ಉತ್ತರ ಕನ್ನಡ), ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹಾಗೂ ಭಟ್ಕಳ ಎಜುಕೇಶನ್ ಟ್ರಸ್ಟ್‌ನ ಸಂಯುಕ್ತ ಆಶ್ರಯದಲ್ಲಿ “ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನ” ಜಾಗೃತಿ ಕಾರ್ಯಕ್ರಮವು ನಗರದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತು.

ಕಾರ್ಯಕ್ರಮವನ್ನು ಭಟ್ಕಳ ತಾಲೂಕು ಎಎಸ್‌ಪಿ ರಾನು ಗುಪ್ತಾ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಜಯ ದೊಡ್ಡಮನಿ, ಭಟ್ಕಳ ಎಜುಕೇಶನ್ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ರಾಜೇಶ ನಾಯಕ್ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ. ಶಂಕರ್ ರಾವ್ ಭಾಗವಹಿಸಿದ್ದರು.

ಮಂಗಳೂರಿನ ಕೆ.ಎಸ್. ಹೆಗಡೆ ಮೆಡಿಕಲ್ ಅಕಾಡೆಮಿಯ ಚೈಲ್ಡ್ ಅಂಡ್ ಅಡೋಲೆಸೆಂಟ್ ಸೈಕಿಯಾಟ್ರಿ ಅಸಿಸ್ಟೆಂಟ್ ಪ್ರೊಫೆಸರ್ ಡಾ. ಎಚ್. ಎನ್. ಪ್ರತಿಭಾ ಅವರು ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾನಸಿಕ ಒತ್ತಡ ನಿರ್ವಹಣೆ ಹಾಗೂ ಆತ್ಮಹತ್ಯೆ ತಡೆಗಟ್ಟುವ ಕುರಿತು ಸಭಿಕರಿಗೆ ಜಾಗೃತಿ ಮೂಡಿಸಿದರು.

ಕಾರ್ಯಕ್ರಮದಲ್ಲಿ ಕೆಜಿಎಂಓಎ ಉತ್ತರ ಕನ್ನಡ ಘಟಕದ ಅಧ್ಯಕ್ಷೆ ಡಾ. ಸವಿತಾ ಕಾಮತ, ಪ್ರಧಾನ ಕಾರ್ಯದರ್ಶಿ ಡಾ. ಡಿ. ಶ್ರುತಿ, ವಿದ್ಯಾರ್ಥಿಗಳು, ವೈದ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

About The Author

error: Content is protected !!