September 20, 2026

ಹಿರಿಯ ಮಾಜಿ ಸೈನಿಕ ರಾಮ ಮಂಜು ನಾಯ್ಕ ನಿಧನ

ಭಟ್ಕಳ: ತಾಲೂಕಿನ ಹಿರಿಯ ನಿವೃತ್ತ ಮಾಜಿ ಸೈನಿಕ ಹಾಗೂ ಭಟ್ಕಳ ತಾಲೂಕು ಮಾಜಿ ಸೈನಿಕರ ಸಂಘದ ಹಿರಿಯ ಸದಸ್ಯ ಕೋಕ್ತಿನಗರದ ರಾಮ ಮಂಜು ನಾಯ್ಕ (86) ಅವರು ಅನಾರೋಗ್ಯದಿಂದ ಬುಧವಾರ ಸ್ವಗೃಹದಲ್ಲಿ ನಿಧನರಾದರು.
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಮುಂದುವರಿದರೂ ಫಲಕಾರಿಯಾಗದೆ ಸ್ವಗೃಹದಲ್ಲಿ ಕೊನೆಯುಸಿರೆಳೆದರು.


ರಾಮ ಮಂಜು ನಾಯ್ಕ ಅವರು ಭಾರತೀಯ ಸೇನೆಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿ, ದೇಶದ ವಿವಿಧೆಡೆ ಕರ್ತವ್ಯ ನಿರ್ವಹಿಸಿದ್ದರು. ನಿವೃತ್ತಿಯ ಬಳಿಕವೂ ಮಾಜಿ ಸೈನಿಕರ ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು.


ಮೃತರು ಪತ್ನಿ, ಮೂವರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಅವರ ನಿಧನಕ್ಕೆ ಭಟ್ಕಳ ತಾಲೂಕು ಮಾಜಿ ಸೈನಿಕರ ಸಂಘ (ರಿ.) ಸೇರಿದಂತೆ ತಾಲೂಕಿನ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಸಂತಾಪ ಸೂಚಿಸಿದ್ದಾರೆ.

About The Author

error: Content is protected !!