ಹೊನ್ನಾವರ: ಇತ್ತೀಚೆಗೆ ನಡೆದ ಹೊನ್ನಾವರ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಅಳ್ಳಂಕಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು 11 ಪ್ರಥಮ, 7 ದ್ವಿತೀಯ ಹಾಗೂ 4 ತೃತೀಯ ಸ್ಥಾನಗಳನ್ನು ಗಳಿಸಿ ಒಟ್ಟು 22 ಸ್ಪರ್ಧೆಗಳಲ್ಲಿ ವಿಜೇತರಾಗುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಸಾಧನೆಗೈದ ವಿದ್ಯಾರ್ಥಿಗಳನ್ನು ಕಾಲೇಜಿನಲ್ಲಿ ಗೌರವಿಸಲಾಯಿತು.

ವೈಯಕ್ತಿಕ ಜೀವನ ಸುಂದರಗೊಳಿಸುವ ಕಲೆ: ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ನಿವೃತ್ತ ಪ್ರಾಚಾರ್ಯ ಡಾ. ಜಿ.ಎಸ್. ಹೆಗಡೆ, ಸಂಗೀತ, ಸಾಹಿತ್ಯ ಹಾಗೂ ನೃತ್ಯದಂತಹ ಕಲೆಗಳು ವೈಯಕ್ತಿಕ ಜೀವನವನ್ನು ಸುಂದರಗೊಳಿಸುವುದರ ಜೊತೆಗೆ ಇತರರಿಗೂ ಆನಂದ ನೀಡುತ್ತವೆ. ವಿದ್ಯಾರ್ಥಿ ಹಂತದಲ್ಲೇ ಸಿಗುವ ಅವಕಾಶ ಹಾಗೂ ಪ್ರೋತ್ಸಾಹವನ್ನು ಬಳಸಿಕೊಂಡು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ 11 ಸ್ಪರ್ಧಾಳುಗಳು ಮುಂದಿನ ಉತ್ತಮ ಪ್ರದರ್ಶನಕ್ಕೆ ಸಜ್ಜಾಗಬೇಕು ಎಂದು ಕರೆ ನೀಡಿದರು.
ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ-ಸಾಂಸ್ಕೃತಿಕ ಚಟುವಟಿಕೆ ಪೂರಕ: ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಕಿಶೋರ ನಾಯ್ಕ ಮಾತನಾಡಿ, ಕಾಲೇಜಿನ ಸಾಂಸ್ಕೃತಿಕ ಸಂಘಟಕರ ಪ್ರೋತ್ಸಾಹದಿಂದ ಹೆಚ್ವು ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳುತ್ತಿರುವುದು ಶುಭ ಸೂಚಕ. ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ವ್ಯಕ್ತಿತ್ವಕ್ಕೆ ಮತ್ತಷ್ಟು ಮೆರುಗು ನೀಡುತ್ತದೆ ಎಂದರು.

ಸಮಾರಂಭದಲ್ಲಿ ದೇವಿದಾಸ ಕುಮ್ಟಾಕರ್ ಸ್ವಾಗತಿಸಿದರು. ಶೇಖರ ನಾಯ್ಕ ವಂದನಾರ್ಪಣೆ ಮಾಡಿದರು. ಕುಮಾರಿ ಸ್ವಾತಿ ಮೇಸ್ತ ಕಾರ್ಯಕ್ರಮ ನಿರೂಪಿಸಿದರು.

About The Author


More Stories
ESA ಅಧಿಸೂಚನೆಯಲ್ಲಿ ಅರಣ್ಯವಾಸಿಗಳ ಹಕ್ಕು ಸಂರಕ್ಷಿಸಲು ಕೇಂದ್ರಕ್ಕೆ ಶಿಫಾರಸು ಮಾಡಲು ಚಂದ್ರಕಾಂತ ಕೊಚರೇಕರ ಆಗ್ರಹ
ಶರಾವತಿ ಪಂಪ್ಡ್ ಸ್ಟೋರೇಜ್ ಭೂಗತ ವಿದ್ಯುತ್ ಯೋಜನೆ ಕೈಬಿಡಲು ಚಂದ್ರಕಾಂತ ಕೊಚರೇಕರ ಆಗ್ರಹ
“ನೇತ್ರದಾನ ಶ್ರೇಷ್ಠ ದಾನ” – ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ