ಹೊನ್ನಾವರ / ಅಳ್ಳಂಕಿ: ಇಲ್ಲಿನ ಅಳ್ಳಂಕಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮಿಥುನ ಪ್ರಭಾಕರ ನಾಯ್ಕ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ, ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.

ಗ್ರಾಮೀಣ ಪ್ರತಿಭೆಗೆ ಅಭಿನಂದನೆ: ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಕಾಲೇಜಿಗೆ ಹಾಗೂ ತಾಲೂಕಿಗೆ ಕೀರ್ತಿ ತಂದಿರುವ ಗ್ರಾಮೀಣ ಭಾಗದ ಈ ಕ್ರೀಡಾ ಪ್ರತಿಭೆಯ ಸಾಧನೆಗೆ ಕಾಲೇಜಿನ ಪ್ರಾಚಾರ್ಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯ (CDC) ಪದಾಧಿಕಾರಿಗಳು ಮುಕ್ತಕಂಠದಿಂದ ಶ್ಲಾಘಿಸಿ, ಶುಭ ಹಾರೈಸಿದ್ದಾರೆ.
About The Author


More Stories
ಕರಾವಳಿ-ಮಲೆನಾಡು ಸಮಸ್ಯೆಗಳ ಪರಿಹಾರಕ್ಕೆ ರಾಜಕೀಯ ಪಕ್ಷಗಳ ಒಗ್ಗಟ್ಟಿನ ಹೋರಾಟ ಅಗತ್ಯ: ಚಂದ್ರಕಾಂತ ಕೊಚರೇಕರ
ಅಳ್ಳಂಕಿ ಕಾಲೇಜಿನ ಭರ್ಜರಿ ಸಾಂಸ್ಕೃತಿಕ ಸಾಧನೆ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ESA ಅಧಿಸೂಚನೆಯಲ್ಲಿ ಅರಣ್ಯವಾಸಿಗಳ ಹಕ್ಕು ಸಂರಕ್ಷಿಸಲು ಕೇಂದ್ರಕ್ಕೆ ಶಿಫಾರಸು ಮಾಡಲು ಚಂದ್ರಕಾಂತ ಕೊಚರೇಕರ ಆಗ್ರಹ