ಭಟ್ಕಳ: ತಾಲೂಕಿನ ಮುಟ್ಟಳ್ಳಿಯಲ್ಲಿ ಸೆಪ್ಟೆಂಬರ್ 27ರ ಭಾನುವಾರ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.
ಶ್ರೀ ಕಟ್ಟೆವೀರ ಯುವಶಕ್ತಿ ಸಂಘ (ರಿ.) ಮುಟ್ಟಳ್ಳಿ, ಕ್ರಿಯೇಟಿವ್ ಫ್ರೆಂಡ್ಸ್ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಘ (ರಿ.) ಭಟ್ಕಳ, ಭಟ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಉಡುಪಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಈ ಶಿಬಿರ ನಡೆಯಲಿದೆ. ಮುಟ್ಟಳ್ಳಿ ಗ್ರಾಮದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸಭಾಂಗಣದಲ್ಲಿ ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 2:00 ಗಂಟೆಯವರೆಗೆ ರಕ್ತದಾನ ಸಂಗ್ರಹಣೆ ನಡೆಯಲಿದೆ.

ಮುಟ್ಟಳ್ಳಿಯ ಹಿರಿಯ ಮುಖಂಡ ಹಾಗೂ ನಿವೃತ್ತ ಶಿಕ್ಷಕ ಎಂ.ಕೆ. ನಾಯ್ಕ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಹಾಗೂ ಜನರಲ್ ಸರ್ಜನ್ ಡಾ. ಅರುಣಕುಮಾರ್ ಎನ್.ಎ. ಅಧ್ಯಕ್ಷತೆ ವಹಿಸಲಿದ್ದಾರೆ.
ಕಟ್ಟೆವೀರ ಯುವಶಕ್ತಿ ಸಂಘದ ಅಧ್ಯಕ್ಷ ಚಂದ್ರು ಕುಪ್ಪಯ್ಯ ನಾಯ್ಕ ಹಾಗೂ ಕ್ರಿಯೇಟಿವ್ ಫ್ರೆಂಡ್ಸ್ ಸಂಘದ ಅಧ್ಯಕ್ಷ ಮಹೇಶ ನರಸಿಂಹ ನಾಯ್ಕ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಜೊತೆಗೆ ತಾಲೂಕು ಆಸ್ಪತ್ರೆಯ ಫಿಜಿಷಿಯನ್ ಡಾ. ಪ್ರಕಾಶ ವಿ. ನಾಯ್ಕ, ದಂತ ವೈದ್ಯ ಡಾ. ರವಿ ನಾಯ್ಕ ಹಾಗೂ ಉಡುಪಿ ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ವೀಣಾ ಕುಮಾರಿ ಉಪಸ್ಥಿತರಿರಲಿದ್ದಾರೆ.

ರಕ್ತದಾನ ಮಾಡುವ ಮೂಲಕ ಜೀವ ಉಳಿಸುವ ಈ ಮಹತ್ಕಾರ್ಯದಲ್ಲಿ ಸಾರ್ವಜನಿಕರು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡಬೇಕಾಗಿ ಸಂಘಟಕರು ವಿನಂತಿಸಿದ್ದಾರೆ.
About The Author


More Stories
ಮೈಸೂರು ದಸರಾ ಕ್ರೀಡಾಕೂಟ: ಕರಾಟೆಯಲ್ಲಿ ಕಂಚಿನ ಪದಕ ಗೆದ್ದ ಭಟ್ಕಳದ ಪ್ರವೀಣ್ ಹರಿಜನ್
ನಾಗ ಮಾಸ್ತಿ ಕ್ಷೇತ್ರದಲ್ಲಿ ವೈಭವದ ಮಹಿಳಾ ದಸರಾ; ಪ್ರತಿಭೆ ಅನಾವರಣಕ್ಕೆ ವೇದಿಕೆ
ನಾಗ ಮಾಸ್ತಿ ಕ್ಷೇತ್ರದಲ್ಲಿ ಸಾಂಸ್ಕೃತಿಕ ವೇದಿಕೆಗೆ ಚಾಲನೆ; ಸನಾತನ ಸಂಸ್ಕೃತಿ ರಕ್ಷಣೆಗೆ ಒತ್ತು