October 22, 2026

ಜಿಲ್ಲಾಮಟ್ಟದ ಚೆಸ್ ಸ್ಪರ್ಧೆ: ಕಾರವಾರದ ನಿಧಿ ತೋಡೂರ್‌ಕರ್ ರಾಜ್ಯಮಟ್ಟಕ್ಕೆ ಆಯ್ಕೆ

ಕಾರವಾರ: ಅಂಕೋಲಾದ ಜೈಹಿಂದ್ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಕಾರವಾರದ ಸೇಂಟ್ ಮೈಕಲ್ ಪ್ರೌಢಶಾಲೆಯ ವಿದ್ಯಾರ್ಥಿನಿ ನಿಧಿ ತೋಡೂರ್‌ಕರ್ ಪ್ರಥಮ ಸ್ಥಾನ ಗಳಿಸಿ, ರಾಜ್ಯಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.

ಕಾರವಾರ ಶೈಕ್ಷಣಿಕ ಜಿಲ್ಲೆಯ 5 ತಾಲೂಕುಗಳಿಂದ ಒಟ್ಟು 25 ಪ್ರತಿಭಾವಂತ ವಿದ್ಯಾರ್ಥಿಗಳು ಈ ಜಿಲ್ಲಾಮಟ್ಟದ ಕೂಟದಲ್ಲಿ ಪಾಲ್ಗೊಂಡಿದ್ದರು.

ತೀವ್ರ ಪೈಪೋಟಿಯ ನಡುವೆ ಅತ್ಯುತ್ತಮ ಪ್ರದರ್ಶನ ನೀಡಿದ ನಿಧಿ, ರಾಜ್ಯಮಟ್ಟದಲ್ಲಿ ಉತ್ತರ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸುವ ಅರ್ಹತೆ ಗಿಟ್ಟಿಸಿಕೊಂಡಿದ್ದಾಳೆ.

ಈಕೆ ಕಾರವಾರದ ಜನಪ್ರಿಯ ನ್ಯಾಯವಾದಿ ವಿನೋದ ತೋಡೂರ್‌ಕರ್ ಅವರ ಪುತ್ರಿಯಾಗಿದ್ದಾಳೆ.

ಅಭಿನಂದನೆ ಸಲ್ಲಿಕೆ: ವಿದ್ಯಾರ್ಥಿನಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯಾಧ್ಯಾಪಕರು, ಶಿಕ್ಷಕ ವೃಂದ, ಪೋಷಕರು, ಕರ್ನಾಟಕ ರಾಜ್ಯ ಬೋಧಕರ ಸಂಗಮ ಹಾಗೂ ಕರ್ನಾಟಕ ಸಂಸ್ಕೃತ ಪರಿಷತ್ತಿನ ರಾಜ್ಯಾಧ್ಯಕ್ಷ ಮಂಜುನಾಥ ಗಾಂವಕರ್ ಬರ್ಗಿ, ಪ್ರೌಢ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸುಧೀರ ನಾಯಕ, ಕನ್ನಡ ಚಂದ್ರಮದ ಅಧ್ಯಕ್ಷ ಜಗದೀಶ ನಾಯಕ ಹಾಗೂ ಸಮರ್ಪಣ ವಿಶ್ರಾಂತ ಶಿಕ್ಷಕರ ಬಳಗದ ಸಂಸ್ಥಾಪಕ ಅಧ್ಯಕ್ಷ ಎನ್. ಬಿ. ನಾಯಕ್ ಸೂರ್ವೆ ಶುಭ ಹಾರೈಸಿದ್ದಾರೆ.

    About The Author

    error: Content is protected !!