October 22, 2026

ಜಿಲ್ಲಾಮಟ್ಟದ ಖೋ-ಖೋ ಪಂದ್ಯಾವಳಿ: ರನ್ನರ್ ಅಪ್ ಸಾಧನೆ — ವಿಭಾಗ ಮಟ್ಟಕ್ಕೆ 6 ವಿದ್ಯಾರ್ಥಿಗಳು ಆಯ್ಕೆ

ಅಂಕೋಲಾ: ತಾಲೂಕಿನ ಸತ್ಯಾಗ್ರಹ ಸ್ಮಾರಕ ಸಭಾಭವನದಲ್ಲಿ ಸೆಪ್ಟೆಂಬರ್ 29ರಂದು ಜರುಗಿದ ಜಿಲ್ಲಾಮಟ್ಟದ ಬಾಲಕ ಹಾಗೂ ಬಾಲಕಿಯರ ಖೋ-ಖೋ ಪಂದ್ಯಾವಳಿಯಲ್ಲಿ ಶಾಲೆಯ ವಿದ್ಯಾರ್ಥಿಗಳ ತಂಡ ರನ್ನರ್ ಅಪ್ (ದ್ವಿತೀಯ ಸ್ಥಾನ) ಆಗಿ ಹೊರಹೊಮ್ಮಿದೆ.

ಅತ್ಯುತ್ತಮ ಪ್ರದರ್ಶನ ನೀಡಿದ 3 ಬಾಲಕರು ಹಾಗೂ 3 ಬಾಲಕಿಯರು ವಿಭಾಗ ಮಟ್ಟದ ಖೋ-ಖೋ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.

ಸಾಧಕರಿಗೆ ಗೌರವ: ವಿಭಾಗ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಯ ಕೀರ್ತಿ ಹೆಚ್ಚಿಸಿದ ವಿದ್ಯಾರ್ಥಿಗಳಿಗೆ ಶಾಲಾ ಎಸ್‌ಡಿಎಮ್‌ಸಿ (SDMC) ಪದಾಧಿಕಾರಿಗಳು, ಮುಖ್ಯಾಧ್ಯಾಪಕರು, ಸಹ ಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿಗಳ ಸಂಘವು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದೆ.

ತರಬೇತುದಾರರಿಗೆ ಧನ್ಯವಾದ: ವಿದ್ಯಾರ್ಥಿಗಳಿಗೆ ಕಠಿಣ ಅಭ್ಯಾಸ ಹಾಗೂ ಸೂಕ್ತ ಮಾರ್ಗದರ್ಶನ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರಿಗೆ ಮತ್ತು ಸಹಕರಿಸಿದ ಹಳೆ ವಿದ್ಯಾರ್ಥಿಗಳಿಗೆ ಶಾಲೆಯ ಪರವಾಗಿ ಧನ್ಯವಾದಗಳನ್ನು ಅರ್ಪಿಸಲಾಗಿದೆ.

      About The Author

      error: Content is protected !!