ಭಟ್ಕಳ: ರಾಷ್ಟ್ರೀಯ ಹೆದ್ದಾರಿ-66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಟ್ರಾವೆಲರ್ ಮಿನಿ ಬಸ್ ನಾಪತ್ತೆಯಾಗಿರುವ ಘಟನೆ ಮಣ್ಣುಳಿ ಬಳಿ ನಡೆದಿದೆ.
ವಾಹನ ಮಾಲೀಕ, ಭಟ್ಕಳ ನಿವಾಸಿ ಕೃಷ್ಣ ಅನಂತ ನಾಯ್ಕ (35) ನೀಡಿದ ದೂರಿನ ಮೇರೆಗೆ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳವಾದ ವಾಹನವು ಬಿಳಿ ಬಣ್ಣದ ಟ್ರಾವೆಲರ್ ಮಿನಿ ಬಸ್ (KA-47/7838) ಆಗಿದೆ.
ಸೆಪ್ಟೆಂಬರ್ 27ರಂದು ಬೆಳಿಗ್ಗೆ 11 ಗಂಟೆಗೆ ಮಣ್ಣುಳಿ ಬಳಿ ಸರ್ವಿಸ್ ರಸ್ತೆಯಲ್ಲಿ ವಾಹನವನ್ನು ನಿಲ್ಲಿಸಲಾಗಿತ್ತು. ಸೆಪ್ಟೆಂಬರ್ 28ರಂದು ಮಧ್ಯಾಹ್ನ 12:30ರ ವೇಳೆಗೆ ಮಾಲೀಕರು ಬಂದು ನೋಡಿದಾಗ ಬಸ್ ನಾಪತ್ತೆಯಾಗಿತ್ತು.

ಅಪರಿಚಿತ ಕಳ್ಳರು ಮಿನಿ ಬಸ್ ಕಳವು ಮಾಡಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳ್ಳತನ ನಡೆದ ಅವಧಿಯನ್ನು ಆಧರಿಸಿ, ಸುತ್ತಮುತ್ತಲಿನ ಸಿಸಿಟಿವಿ (CCTV) ದೃಶ್ಯಾವಳಿಗಳು ಹಾಗೂ ವಾಹನ ಸಂಚರಿಸಿರಬಹುದಾದ ಸಾರಿಗೆ ಮಾರ್ಗಗಳ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
ಕಳವಾದ ವಾಹನದ ನೋಂದಣಿ ಸಂಖ್ಯೆ ಹಾಗೂ ಇತರ ಗುರುತುಗಳನ್ನಿಟ್ಟುಕೊಂಡು ಆರೋಪಿಗಳ ಬಂಧನಕ್ಕೆ ಭಟ್ಕಳ ಶಹರ ಠಾಣೆಯ ಪೊಲೀಸರು ಜಾಲ ಬೀಸಿದ್ದಾರೆ.
About The Author


More Stories
ಮೈಸೂರು ದಸರಾ ಕ್ರೀಡಾಕೂಟ: ಕರಾಟೆಯಲ್ಲಿ ಕಂಚಿನ ಪದಕ ಗೆದ್ದ ಭಟ್ಕಳದ ಪ್ರವೀಣ್ ಹರಿಜನ್
ನಾಗ ಮಾಸ್ತಿ ಕ್ಷೇತ್ರದಲ್ಲಿ ವೈಭವದ ಮಹಿಳಾ ದಸರಾ; ಪ್ರತಿಭೆ ಅನಾವರಣಕ್ಕೆ ವೇದಿಕೆ
ನಾಗ ಮಾಸ್ತಿ ಕ್ಷೇತ್ರದಲ್ಲಿ ಸಾಂಸ್ಕೃತಿಕ ವೇದಿಕೆಗೆ ಚಾಲನೆ; ಸನಾತನ ಸಂಸ್ಕೃತಿ ರಕ್ಷಣೆಗೆ ಒತ್ತು