ಭಟ್ಕಳ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಾರ್ವಜನಿಕ ಜೀವನ ಹಾಗೂ ಸೇವಾ ಕಾರ್ಯಗಳನ್ನು ಸ್ಮರಿಸುವ ಉದ್ದೇಶದಿಂದ ಬಿಜೆಪಿ ವತಿಯಿಂದ ಅಕ್ಟೋಬರ್ 7ರಂದು ಕಾರವಾರದಲ್ಲಿ ಆಯೋಜಿಸಿರುವ ‘ಸೇವಾ ಜ್ಯೋತಿ’ ಕಾರ್ಯಕ್ರಮಕ್ಕೆ ಭಟ್ಕಳದಿಂದ ಬೃಹತ್ ತಂಡ ತೆರಳಲಿದೆ ಎಂದು ಮಾಜಿ ಸಚಿವ ಶಿವಾನಂದ ನಂದ ನಾಯ್ಕ ತಿಳಿಸಿದ್ದಾರೆ.
ಭಟ್ಕಳದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಈ ಮಾಹಿತಿ ನೀಡಿದರು.
ಕಾರವಾರದ ಕಾರ್ಯಕ್ರಮಕ್ಕಾಗಿ ಭಟ್ಕಳದಿಂದ 200ಕ್ಕೂ ಅಧಿಕ ಮುಖಂಡರು ಹಾಗೂ ಕಾರ್ಯಕರ್ತರು ಸುಮಾರು 40 ವಾಹನಗಳಲ್ಲಿ ತೆರಳಲಿದ್ದಾರೆ.
ಪ್ರಧಾನಿ ಮೋದಿ ವರ್ಚುವಲ್ ಭಾಷಣ: ಕಾರವಾರದ ಮಿತ್ರ ಸಮಾಜ ಮೈದಾನದಿಂದ ದೈವಜ್ಞ ಕಲ್ಯಾಣ ಮಂಟಪದವರೆಗೆ ಬೃಹತ್ ಮೆರವಣಿಗೆ ನಡೆಯಲಿದ್ದು, ಬಳಿಕ ಸಭಾ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದಲ್ಲಿ ರಾಜ್ಯ ಹಾಗೂ ಜಿಲ್ಲಾ ಮಟ್ಟದ ನಾಯಕರು ಪಾಲ್ಗೊಳ್ಳಲಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆನ್ಲೈನ್ ಮೂಲಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಸಂಘಟನೆ ಬಲವರ್ಧನೆ: ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ನಡೆಯುತ್ತಿರುವ ಈ ಕಾರ್ಯಕ್ರಮಕ್ಕೆ ತಾಲೂಕಿನಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಆಗಮಿಸಬೇಕೆಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ, ರಾಜ್ಯ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷ ಈಶ್ವರ ನಾಯ್ಕ, ಪ್ರಮುಖರಾದ ಗೋವಿಂದ ನಾಯ್ಕ, ಶಿವಾನಿ ಶಾಂತಾರಾಮ, ಸುಬ್ರಾಯ ಶ್ರೀನಿವಾಸ ನಾಯ್ಕ, ಪ್ರಮೋದ್ ಜೋಷಿ, ಭಾಸ್ಕರ ದೈಮನೆ, ಗಣಪತಿ ದೇವಾಡಿಗ, ದಾಸ ನಾಯ್ಕ ತಲಗೋಡು, ಉಮೇಶ ನಾಯ್ಕ, ರಾಘು ನಾಯ್ಕ ಉಪಸ್ಥಿತರಿದ್ದರು.
About The Author


More Stories
ಮೈಸೂರು ದಸರಾ ಕ್ರೀಡಾಕೂಟ: ಕರಾಟೆಯಲ್ಲಿ ಕಂಚಿನ ಪದಕ ಗೆದ್ದ ಭಟ್ಕಳದ ಪ್ರವೀಣ್ ಹರಿಜನ್
ನಾಗ ಮಾಸ್ತಿ ಕ್ಷೇತ್ರದಲ್ಲಿ ವೈಭವದ ಮಹಿಳಾ ದಸರಾ; ಪ್ರತಿಭೆ ಅನಾವರಣಕ್ಕೆ ವೇದಿಕೆ
ನಾಗ ಮಾಸ್ತಿ ಕ್ಷೇತ್ರದಲ್ಲಿ ಸಾಂಸ್ಕೃತಿಕ ವೇದಿಕೆಗೆ ಚಾಲನೆ; ಸನಾತನ ಸಂಸ್ಕೃತಿ ರಕ್ಷಣೆಗೆ ಒತ್ತು