ಭಟ್ಕಳ: ಶಿಕ್ಷಣ ಹಾಗೂ ದೈಹಿಕ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ನಿರಂತರ ಹಾಗೂ ಗಣನೀಯ ಸೇವೆಯನ್ನು ಗುರುತಿಸಿ ಕೆಪಿಎಸ್ (KPS) ಬೈಲೂರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಭಟ್ಕಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಧರ್ಮ ನಾಯ್ಕ ಅವರಿಗೆ ಪ್ರತಿಷ್ಠಿತ ‘ಕಾಯಕ ರತ್ನ ರಾಜ್ಯ ಪ್ರಶಸ್ತಿ-2026’ ನೀಡಿ ಗೌರವಿಸಲಾಗಿದೆ.

ಪವರ್ ಆಫ್ ಯೂತ್ಸ್ ಫೌಂಡೇಶನ್, ಕರ್ನಾಟಕ ಇವರ ಆಶ್ರಯದಲ್ಲಿ ಧಾರವಾಡದ ರಂಗಾಯಣದ ಸಾಂಸ್ಕೃತಿಕ ಸಮುಚ್ಚಯ ಭವನದಲ್ಲಿ ನಡೆದ ವಿವಿಧ ಇಲಾಖೆಗಳ ಸಾಧಕ ನೌಕರರಿಗೆ ರಾಜ್ಯ ಪ್ರಶಸ್ತಿ ಪ್ರದಾನ ಹಾಗೂ ‘ಅಂಚೆ ಪತ್ರ’ ಶೈಕ್ಷಣಿಕ ಕಿರುಚಿತ್ರ ಬಿಡುಗಡೆ ಸಮಾರಂಭದಲ್ಲಿ ಈ ಗೌರವ ಸಮರ್ಪಿಸಲಾಯಿತು.
ತಮ್ಮ ಸುದೀರ್ಘ ಸೇವಾವಧಿಯಲ್ಲಿ ಕ್ರೀಡಾ ಕ್ಷೇತ್ರದ ಬೆಳವಣಿಗೆಗೆ ಶ್ರಮಿಸುವುದರ ಜೊತೆಗೆ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಧರ್ಮ ನಾಯ್ಕ ಅವರ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ, ಕ್ರೀಡಾಭಿಮಾನಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ವರದಿ: ಭಾವನಾ ಟಿವಿ ಡೆಸ್ಕ್

About The Author


More Stories
ಮೈಸೂರು ದಸರಾ ಕ್ರೀಡಾಕೂಟ: ಕರಾಟೆಯಲ್ಲಿ ಕಂಚಿನ ಪದಕ ಗೆದ್ದ ಭಟ್ಕಳದ ಪ್ರವೀಣ್ ಹರಿಜನ್
ನಾಗ ಮಾಸ್ತಿ ಕ್ಷೇತ್ರದಲ್ಲಿ ವೈಭವದ ಮಹಿಳಾ ದಸರಾ; ಪ್ರತಿಭೆ ಅನಾವರಣಕ್ಕೆ ವೇದಿಕೆ
ನಾಗ ಮಾಸ್ತಿ ಕ್ಷೇತ್ರದಲ್ಲಿ ಸಾಂಸ್ಕೃತಿಕ ವೇದಿಕೆಗೆ ಚಾಲನೆ; ಸನಾತನ ಸಂಸ್ಕೃತಿ ರಕ್ಷಣೆಗೆ ಒತ್ತು