ಅಥಣಿ: ಇಲ್ಲಿನ ನೂತನ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಡಿವೈಎಸ್‌ಪಿ) ಅಧಿಕಾರ ಸ್ವೀಕರಿಸಿರುವ ವೀರೇಂದ್ರ ಕುಮಾರ್ ಪಿ. ಅವರನ್ನು ಅಂತರರಾಷ್ಟ್ರೀಯ ಮಾನವ ಹಕ್ಕುಗಳ ರಕ್ಷಣಾ ಆಯೋಗದ ಬೆಳಗಾವಿ ಜಿಲ್ಲಾ ಕಾರ್ಯನಿರತ ಅಧ್ಯಕ್ಷ ಅಕ್ಷಯ್ ಮ್ಯಾಗೇರಿ ಅವರು ಭೇಟಿ ಮಾಡಿ ಆತ್ಮೀಯವಾಗಿ ಸನ್ಮಾನಿಸಿದರು.
ನೂತನ ಡಿವೈಎಸ್‌ಪಿ ಅವರಿಗೆ ಪುಷ್ಪಗುಚ್ಛ ನೀಡಿ, ಶಾಲು ಹೊದಿಸಿ ಗೌರವಿಸಿದ ಅಕ್ಷಯ್ ಮ್ಯಾಗೇರಿ, ಅಥಣಿ ತಾಲೂಕಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸುವ ಜೊತೆಗೆ ಸಾರ್ವಜನಿಕರ ಹಾಗೂ ಮಾನವ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಿವೈಎಸ್‌ಪಿ ವೀರೇಂದ್ರ ಕುಮಾರ್ ಪಿ., “ತಾಲೂಕಿನಲ್ಲಿ ಶಾಂತಿ, ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಪ್ರಾಮಾಣಿಕವಾಗಿ ಶ್ರಮಿಸಲಾಗುವುದು. ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ನ್ಯಾಯ ಒದಗಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ” ಎಂದು ತಿಳಿಸಿದರು.
ಈ ಶುಭ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳು, ಗಣ್ಯರು ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು. ವರದಿ : ಮಹೇಶ ಶರ್ಮ

About The Author


More Stories
‘ಕಣ್ಣಾಮುಚ್ಚಾಲೆ’ ಆಟ: ಜಿ-ಮಾರ್ಟ್ ಎದುರು ಅರ್ಧಕ್ಕೇ ನಿಂತ ಶೌಚಾಲಯ, ಮಹಿಳೆಯರ ಪರದಾಟ
ಅಥಣಿಯ ಶಿವಯೋಗಿ ನಗರದಲ್ಲಿ ಮೂಲಭೂತ ಸೌಕರ್ಯಗಳ ಅಭಾವ: ಹೆದ್ದಾರಿಯಲ್ಲಿ ‘ಸ್ಪೀಡ್ ಬ್ರೇಕರ್’, ಶಾಲಾ ಮೇಲ್ದರ್ಜೆಗೆ ಸ್ಥಳೀಯರ ಉಗ್ರ ಆಗ್ರಹ.
ಅಥಣಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ: ರಾಜು ಡವರಿ ಅವರಿಂದ ಧ್ವಜಾರೋಹಣ