ವಿರಾಜಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಜ್ಞಾನವಿಕಾಸ ಕಾರ್ಯಕ್ರಮದಡಿ ವಿರಾಜಪೇಟೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಆಯೋಜನೆಗೊಂಡಿತು.
ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ವೀಣಾ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಉಡುಪಿ ಜಿಲ್ಲೆಯ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಶಿಕ್ಷಣ ಹಾಗೂ ಆರ್ಥಿಕ ಸ್ವಾತಂತ್ರ್ಯಕ್ಕೆ ಕರೆ: ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಆನಂದ ಸುವರ್ಣ, “ಮಹಿಳೆಯರು ಶಿಕ್ಷಣಕ್ಕೆ ಆದ್ಯತೆ ನೀಡುವ ಮೂಲಕ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಬೇಕು. ಸಮಾಜದಲ್ಲಿ ಮಹಿಳೆಯರ ಸ್ಥಾನಮಾನವನ್ನು ಹೆಚ್ಚಿಸುವಲ್ಲಿ ಶಿಕ್ಷಣ ಹಾಗೂ ಆರ್ಥಿಕ ಸ್ವಾತಂತ್ರ್ಯ ಪ್ರಮುಖ ಪಾತ್ರ ವಹಿಸುತ್ತವೆ. ಸಂಘಟಿತರಾಗಿ ಯೋಜನೆಯ ಸೌಲಭ್ಯಗಳನ್ನು ಬಳಸಿಕೊಂಡು ಪ್ರಗತಿಯತ್ತ ಸಾಗಬೇಕು” ಎಂದು ಮಾರ್ಗದರ್ಶನ ನೀಡಿದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಮತಿ ವಾಣಿಶ್ರೀ ಮಾತನಾಡಿ, ಮಹಿಳೆಯರು ತಮ್ಮದೇ ಆದ ಸ್ವತಂತ್ರ ಗುರುತನ್ನು ಬೆಳೆಸಿಕೊಳ್ಳಬೇಕು ಹಾಗೂ ಮಕ್ಕಳನ್ನು ತಪ್ಪು ದಾರಿಗೆ ಹೋಗದಂತೆ ನೈತಿಕ ಮಾರ್ಗದಲ್ಲಿ ಬೆಳೆಸುವ ಜವಾಬ್ದಾರಿಯನ್ನು ಪೋಷಕರು ಹೊರಬೇಕು ಎಂದರು. ಮಡಿಕೇರಿ ಜಿಲ್ಲಾ ಪೊಲೀಸ್ ಕಚೇರಿಯ ಮಕ್ಕಳ ವಿಶೇಷ ಪೊಲೀಸ್ ಘಟಕದ ಎಎಸ್ಐ ಶ್ರೀಮತಿ ಸುಮತಿ ಸಹ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.

ಸ್ವಉದ್ಯೋಗದ ಕುರಿತು ಉಪನ್ಯಾಸ: ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಪೊನ್ನಂಪೇಟೆ ಸಿಐಪಿಯು ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ. ಸುಶಿತಾ ಪಿ.ವಿ. ಅವರು “ಸ್ವಾವಲಂಬಿ ಬದುಕಿನ ನಿರ್ವಹಣೆಯಲ್ಲಿ ಸ್ವಉದ್ಯೋಗದ ಪಾತ್ರ” ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ನೀಡಿ, ಮಹಿಳೆಯರು ಸುಲಭವಾಗಿ ಆರಂಭಿಸಬಹುದಾದ ಸ್ವಉದ್ಯೋಗ ಅವಕಾಶಗಳು ಹಾಗೂ ಅವುಗಳ ಅನುಷ್ಠಾನದ ಕುರಿತು ಸವಿಸ್ತಾರ ಮಾಹಿತಿ ನೀಡಿದರು.
ವಿವಿಧ ಸ್ಪರ್ಧೆ ಹಾಗೂ ಸನ್ಮಾನ: ಕಾರ್ಯಕ್ರಮದ ಅಂಗವಾಗಿ ರಂಗೋಲಿ ಹಾಗೂ ಪುಷ್ಪಗುಚ್ಛ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಇದೇ ವೇಳೆ ‘ಸುಜ್ಞಾನ ನಿಧಿ’ ಶಿಷ್ಯವೇತನದ ಫಲಾನುಭವಿ ಮಕ್ಕಳಿಗೆ ಮಂಜೂರಾತಿ ಪತ್ರ ವಿತರಿಸಲಾಯಿತು. ಜ್ಞಾನವಿಕಾಸ ಕೇಂದ್ರದ ಸದಸ್ಯರು ಪ್ರದರ್ಶಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.
ಕಾರ್ಯಕ್ರಮದಲ್ಲಿ ಯೋಜನೆಯ ಮೇಲ್ವಿಚಾರಕರಾದ ಧನೇಶ್, ವಸಂತ್, ಶಿವಕುಮಾರ್, ಗೀತಾ, ಪುಷ್ಪಲತಾ, ಪ್ರತಾಪ್ ಸೇರಿದಂತೆ ಸೇವಾ ಪ್ರತಿನಿಧಿಗಳು ಹಾಗೂ ನೂರಾರು ಮಹಿಳೆಯರು ಭಾಗವಹಿಸಿದ್ದರು.(ವರದಿ: ಪ್ರಿತುನ್ ಪೂವಣ್ಣ)
About The Author


More Stories
ಬೆಳ್ಳೂರು: ಹುಲಿ ದಾಳಿಗೆ ೧೩ನೇ ಹಸು ಬಲಿ; ಡಿಎಫ್ಒ ವಾಹನ ತಡೆದು ಗ್ರಾಮಸ್ಥರ ತೀವ್ರ ಪ್ರತಿಭಟನೆ
ಜನಮನ ಸೆಳೆದ ಗೋಣಿಕೊಪ್ಪದ ೧೧ನೇ ವರ್ಷದ ಶ್ರೀ ಕಾವೇರಿ ಮಹಿಳಾ ದಸರಾ
ಕೊಡಗಿನ ಪ್ರತಿಷ್ಠಿತ ‘ಗೌರಮ್ಮ ದತ್ತಿ ಪ್ರಶಸ್ತಿ’ಗೆ ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿ ಆಯ್ಕೆ