ಆಟೋ ಚಾಲಕರೊಂದಿಗೆ ಸೌಹಾರ್ದ ಸಭೆ; ಅಕ್ರಮ ಚಟುವಟಿಕೆ ತಡೆಗೆ ಪೊಲೀಸರೊಂದಿಗೆ ಸಹಕರಿಸಲು ಮನವಿ
ಪೊನ್ನಂಪೇಟೆ: ಪಟ್ಟಣದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಅಸಮರ್ಪಕ ಪಾರ್ಕಿಂಗ್ ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊನ್ನಂಪೇಟೆ ಠಾಣಾಧಿಕಾರಿ ಅನ್ನಪೂರ್ಣ ಎಸ್.ಎಸ್. ತಿಳಿಸಿದರು.

ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಶ್ರೀ ನಂದೀಶ್ವರ ಆಟೋ ಚಾಲಕರ ಮತ್ತು ಮಾಲೀಕರ ಸಂಘ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸೂಚನಾ ಫಲಕ ಅಳವಡಿಕೆಗೆ ಚರ್ಚೆ: ಪಟ್ಟಣದ ಆಯಕಟ್ಟಿನ ಸ್ಥಳಗಳಲ್ಲಿ ಸೂಕ್ತ ಪಾರ್ಕಿಂಗ್ ಸೂಚನಾ ಫಲಕಗಳನ್ನು ಅಳವಡಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಚಾಲಕರು ನಿಯಮಿತ ಪಾರ್ಕಿಂಗ್ ಸ್ಥಳಗಳಲ್ಲೇ ವಾಹನಗಳನ್ನು ನಿಲ್ಲಿಸುವ ಮೂಲಕ ಸಂಚಾರ ಸುಗಮಗೊಳಿಸಲು ಸಹಕರಿಸಬೇಕು ಎಂದು ತಿಳಿಸಿದರು.

ಅಲ್ಲದೆ, ಆಟೋ ಚಾಲಕರು ಚಾಲನಾ ಪರವಾನಗಿ (DL) ಸೇರಿದಂತೆ ಅಗತ್ಯ ದಾಖಲೆಗಳನ್ನು ಸಮರ್ಪಕವಾಗಿ ಕಾಯ್ದುಕೊಳ್ಳಬೇಕು ಎಂದು ಸೂಚಿಸಿದರು. ಪಟ್ಟಣ ವ್ಯಾಪ್ತಿಯಲ್ಲಿ ಯಾವುದೇ ಅಕ್ರಮ ಅಥವಾ ಸಮಾಜಘಾತಕ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣವೇ ಠಾಣೆಗೆ ಮಾಹಿತಿ ನೀಡಬೇಕು. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಆಟೋ ಚಾಲಕರ ಪಾತ್ರ ಪ್ರಮುಖವಾಗಿದ್ದು, ಪೊಲೀಸರೊಂದಿಗೆ ಸದಾ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಶ್ರೀ ನಂದೀಶ್ವರ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಉಪಾಧ್ಯಕ್ಷ ಚಮ್ಮಟ್ಟೀರ ಶಾಂತಾ ಪೋನ್ನಪ್ಪ, ಕಾರ್ಯದರ್ಶಿ ಬಿ.ಎಸ್. ಸುರೇಶ್, ಖಜಾಂಚಿ ಮಂಜು ಎನ್.ಕೆ., ಸಂಘದ ಸದಸ್ಯರು ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು. (ವರದಿ: ಪ್ರಿತುನ್ ಪೂವಣ್ಣ)
About The Author


More Stories
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ
ಬೆಳ್ಳೂರು: ಹುಲಿ ದಾಳಿಗೆ ೧೩ನೇ ಹಸು ಬಲಿ; ಡಿಎಫ್ಒ ವಾಹನ ತಡೆದು ಗ್ರಾಮಸ್ಥರ ತೀವ್ರ ಪ್ರತಿಭಟನೆ
ಜನಮನ ಸೆಳೆದ ಗೋಣಿಕೊಪ್ಪದ ೧೧ನೇ ವರ್ಷದ ಶ್ರೀ ಕಾವೇರಿ ಮಹಿಳಾ ದಸರಾ