ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಅಪ್ಪಯ್ಯ ಗೌಡರ ಕೊಡುಗೆ ಅನನ್ಯ: ಶಾಸಕರ ಸ್ಮರಣೆ
ಮಡಿಕೇರಿ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಕೊಡಗು ಜಿಲ್ಲಾಡಳಿತದ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟದ ವೀರ ಸೇನಾನಿ ಸುಬೇದಾರ್ ಅಪ್ಪಯ್ಯ ಗೌಡ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭಾಗವಹಿಸಿ, ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಗೌರವ ಸಮರ್ಪಿಸಿದರು.

ಬ್ರಿಟಿಷರ ವಿರುದ್ಧದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸುಬೇದಾರ್ ಅಪ್ಪಯ್ಯ ಗೌಡ ಅವರು ದೇಶ ಹಾಗೂ ರಾಜ್ಯಕ್ಕೆ ನೀಡಿದ ಅಪ್ರತಿಮ ಕೊಡುಗೆ ಮತ್ತು ಅವರ ಬಲಿದಾನವನ್ನು ಈ ಸಂದರ್ಭದಲ್ಲಿ ಶಾಸಕ ಪೊನ್ನಣ್ಣ ಅವರು ಕೃತಜ್ಞತೆಯಿಂದ ಸ್ಮರಿಸಿದರು.

ಸಮಾರಂಭದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಸೇರಿದಂತೆ ಹಲವು ಪ್ರಮುಖರು ಹಾಗೂ ಸಾಂಸ್ಕೃತಿಕ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು.

More Stories
ಆಂಗ್ಲ ಭಾಷೆಯ ನಾಮಫಲಕ ಅಳವಡಿಕೆಗೆ ಕರವೇ ಆಕ್ರೋಶ; ನಗರಸಭೆ ವಿರುದ್ಧ ಕಿಡಿ
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ‘ಯುವ ಸಂಸತ್ತು’ ಉದ್ಘಾಟಿಸಿದ ಶಾಸಕ ಡಾ. ಮಂತರ್ ಗೌಡ
ಮಿತಿಮೀರಿದ ಪ್ರವಾಸಿಗರಿಂದ ಸೂಕ್ಷ್ಮ ಪರಿಸರದ ಮೇಲೆ ತೀವ್ರ ಒತ್ತಡ; ನಿವೃತ್ತ ಕರ್ನಲ್ ಮುತ್ತಣ್ಣ ಕಳವಳ