November 22, 2026

ಅತಿವೇಗ ಹಾಗೂ ಅಜಾಗರೂಕತೆ ಚಾಲನೆ – ಬೈಕ್ ನಿಯಂತ್ರಣ ತಪ್ಪಿ ಬಿದ್ದು ಹಿಂಬದಿ ಸವಾರನಿಗೆ ಗಾಯ

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಭಟ್ಕಳ (ಉತ್ತರ ಕನ್ನಡ): ತಾಲೂಕಿನ ಮಾರೂಕೇರಿ ಗ್ರಾಮದ ಮರಂಬಳ್ಳಿ ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಬೈಕ್ ಸವಾರನ ಅತಿವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದ ನಿಯಂತ್ರಣ ತಪ್ಪಿ ವಾಹನ ರಸ್ತೆಗೆ ಬಿದ್ದ ಪರಿಣಾಮ ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ವರದಿಯಾಗಿದೆ.

ಹಾಡುವಳ್ಳಿಯಿಂದ ಭಟ್ಕಳ ಕಡೆಗೆ ಸಂಜಯ ಎಂಬಾತ ಕೆಎ-20/ಇಆರ್‌ಜೆಡ್-9105 ನೋಂದಣಿ ಸಂಖ್ಯೆಯ ಮೋಟಾರ್ ಸೈಕಲ್ ಅನ್ನು ಅತಿವೇಗ ಮತ್ತು ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಬರುತ್ತಿದ್ದ ಎನ್ನಲಾಗಿದೆ. ಮಾರ್ಗಮಧ್ಯೆ ಮರಂಬಳ್ಳಿ ಕ್ರಾಸ್ ಸಮೀಪ ಬೈಕ್‌ನ ನಿಯಂತ್ರಣ ಸಂಪೂರ್ಣ ತಪ್ಪಿದ ಕಾರಣ ಸವಾರ ಹಾಗೂ ಬೈಕ್ ರಸ್ತೆಗೆ ಉರುಳಿಬಿದ್ದಿವೆ.

ಈ ಅಪಘಾತದ ರಭಸಕ್ಕೆ ಬೈಕ್‌ನಲ್ಲಿದ್ದ ಹಿಂಬದಿ ಸವಾರ ನಾರಾಯಣ ನಾಯ್ಕ ಅವರ ಬಲಗೈ ಭುಜಕ್ಕೆ, ತಲೆಯ ಭಾಗಕ್ಕೆ ಹಾಗೂ ಗದ್ದದ ಸಮೀಪ ತೀವ್ರ ಪೆಟ್ಟಾಗಿ ಗಾಯಗಳಾಗಿವೆ.

ಘಟನೆ ಕುರಿತು ಗಾಯಾಳು ನಾರಾಯಣ ನಾಯ್ಕ ಅವರು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

About The Author

error: Content is protected !!